ಹಾಸನ: ಸದಾ ಒಂದಿಲ್ಲೊಂದು ವಿಶೇಷ ಪ್ರತಿಭಟನೆಯಲ್ಲಿ ಭಾಗಿಯಾಗುವ ಶಾಸಕರಾದ ಎ.ಟಿ.ರಾಮಸ್ವಾಮಿ ಇಂದು ಅರಕಲಗೂಡು ತಾಲೂಕು ಕಚೇರಿ ಮುಂದೆ ರಾಜ್ಯ ಸರ್ಕಾರದ ಕಾಯ್ದೆ ಜಾರಿ ವಿರುದ್ಧ ಏಕಾಂಗಿ ಪ್ರತಿಭಟನೆ ನಡೆಸಿದರು.
ಅರಕಲಗೂಡು ತಾಲೂಕು ಕಚೇರಿ ಎದುರು ರೈತರ, ಬಡವರ ವಿರೋಧಿ ಕಾನೂನುಗಳಿಗೆ ಧಿಕ್ಕಾರ ಎಂಬ ನಾಮಫಲಕ ಹಿಡಿದು, ಸರ್ಕಾರದ ರೈತ ವಿರೋಧಿ ನಡೆ ವಿರುದ್ಧ ಆಕ್ರೋಶ ಹೊರಹಾಕಿದರು.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ ಶಾಸಕರು ತಮ್ಮದೇ ಆದ ರೀತಿಯಲ್ಲಿ ಬಂದ್‍ಗೆ ಬೆಂಬಲ ಸೂಚಿಸಿದ್ದು ವಿಶೇಷವಾಗಿತ್ತು. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಹೆಸರನ್ನು ಹೊಂದಿರುವ ರಾಮಸ್ವಾಮಿಯವರು ಜೆಡಿಎಸ್ ಪಕ್ಷದ ನಿಷ್ಠಾವಂತ ರಾಜಕೀಯ ಮುಖಂಡರಲ್ಲಿ ಒಬ್ಬರು. ನೇರ ಮಾತುಗಾರಿಕೆಯಿಂದ ಹೆಸರಾಗಿರುವ ಅವರು ಏಕಾಂಗಿಯಾಗಿ ಪ್ರತಿಭಟನೆ ಮಾಡುವ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ.
ಇತ್ತೀಚೆಗೆ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರ ವಿರುದ್ಧವೇ ಮಾತನಾಡಿದ್ದ ಶಾಸಕರು ಇಂದು ಏಕಾಂಗಿ ಪ್ರತಿಭಟನೆ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ ಎನ್ನಬಹುದು. ಇದನ್ನೂ ಓದಿ: ರೇವಣ್ಣ ಸರ್ವಾಧಿಕಾರಿ ಮನೋಭಾವ ಬಿಡಲೇಬೇಕು – ಜೆಡಿಎಸ್ ಶಾಸಕ ಎಟಿ.ರಾಮಸ್ವಾಮಿ