ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ನಡೆದಿದ್ದು, ಬರೋಬ್ಬರಿ 2.33 ಕೋಟಿ ಸಂಗ್ರಹವಾಗಿದೆ.
Advertisement
122 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದರೂ ಕೊರೊನಾ ಲಾಕ್ ಡೌನ್ ಪರಿಣಾಮ 75 ದಿನ ಭಕ್ತರಿಗೆ ದೇವಾಲಯ ಬಂದ್ದಾಗಿದ್ದರಿಂದ ಕೇವಲ 47 ದಿನಗಳಲ್ಲಿ 2,33,57,28 ಕೋಟಿ ರೂ. ಸಂಗ್ರಹವಾಗಿದ್ದು ಭಕ್ತಾದಿಗಳು ಮಾದಪ್ಪನಿಗೆ ಹಣದ ರೂಪದಲ್ಲಿ ಭಕ್ತಿಯ ಹೊಳೆಯನ್ನೇ ಹರಿಸಿದ್ದಾರೆ. ಇಷ್ಟೇ ಅಲ್ಲದೇ ಹುಂಡಿಯಲ್ಲಿ 150 ಗ್ರಾಂ ಚಿನ್ನ, 2.2 ಕೆಜಿ ಬೆಳ್ಳಿಯನ್ನು ಭಕ್ತರು ದೇವರಿಗೆ ಅರ್ಪಿಸಿದ್ದಾರೆ.
Advertisement
Advertisement
ಇಂದಿನಿಂದ ದಾಸೋಹ ವ್ಯವಸ್ಥೆ: ಮಹಾಮಾರಿ ಕರಿ ಛಾಯೆ ಮಲೆಮಹದೇಶ್ವರ ಬೆಟ್ಟದಲ್ಲಿ ಸ್ಥಗಿತಗೊಂಡಿದ್ದ ದಾಸೋಹ ವ್ಯವಸ್ಥೆ ಇಂದಿನಿಂದ ಪ್ರಾರಂಭವಾಗಲಿದೆ. ಆದರೆ ಲಾಡು ವಿತರಣೆ, ವಿಶೇಷ ಸೇವೆಗಳು, ಮುಡಿ ಸೇವೆಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಬಿಎಸ್‍ವೈ ರಾಜೀನಾಮೆ ನೀಡಿದ್ರೆ ಬಿಜೆಪಿಯಿಂದ ಲಿಂಗಾಯತ ಸಮುದಾಯ ದೂರಾಗುತ್ತೆ: ಸಿದ್ದಲಿಂಗ ಸ್ವಾಮೀಜಿ