ನವದೆಹಲಿ: ಕೋವಿಡ್ 19ಗೆ ತುತ್ತಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಏ.19 ರಂದು ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಪೂರ್ಣವಾಗಿ ಚೇತರಿಕೆಯಾದ ಹಿನ್ನೆಲೆಯಲ್ಲಿ ಇಂದು ಮನಮೋಹನ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಏಮ್ಸ್ ಆಸ್ಪತ್ರೆಯ ಟ್ರಾಮಾ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು.