ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಮೂಲದ 103 ವರ್ಷದ ವೃದ್ಧನೋರ್ವ ಇಳಿವಯಸ್ಸಿನಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ವೀರೇಂದ್ರ ನಗರ ಪ್ರದೇಶದ ನಿವಾಸಿಯಾಗಿರುವ ಶಮರಾವ್ ಇಂಗ್ಲೆ ಕೊರೊನಾ ಸೋಂಕಿಗೆ ಒಳಗಾಗಿ ಪಾಲ್ಘರ್ ಗ್ರಾಮೀಣ ಆಸ್ಪತ್ರೆಗೆ ಕೋವಿಡ್-19 ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಕೊರೊನಾದಿಂದ ಚೇತರಿಸಿಕೊಂಡು ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಈ ಬಗ್ಗೆ ಆಸ್ಪತ್ರೆಯ ವೈದ್ಯರು, ಹಿರಿಯರಾದರೂ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ ಮತ್ತು ಸಿಬ್ಬಂದಿಯೊಂದಿಗೆ ಸಹಕರಿಸಿದರು. ಶನಿವಾರ ಅವರು ಆಸ್ಪತ್ರೆಯಿಂದ ಹೊರಹೋಗುವಾಗ ನಗುಮುಖದಿಂದ ತೆರಳಿದರು ಎಂದು ಹೇಳಿದ್ದಾರೆ.
ಶಮರಾವ್ ಇಂಗ್ಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ಪಾಲ್ಘರ್ ಜಿಲ್ಲಾಧಿಕಾರಿ ಡಾ. ಮಣಿಕ್ ಗುರ್ಸಾಲ್ ಮತ್ತು ಆಸ್ಪತ್ರೆಯ ಸಿಬ್ಬಂದಿ ಹೂವುಗಳನ್ನು ಹಾಕುವ ಮೂಲಕ ಬೀಳ್ಕೊಟ್ಟಿದ್ದಾರೆ.