ಕೊರೊನಾ ಚಿಕಿತ್ಸೆ- ಸಿಎಂಗೆ ಅಮೂಲ್ಯವಾದ ಸಲಹೆಗಳನ್ನಿತ್ತ ಸಿದ್ದರಾಮಯ್ಯ

Public TV
1 Min Read
SIDDU BSY

ಬೆಂಗಳೂರು: ಕೊರೊನಾ ಚಿಕಿತ್ಸೆ ಬಗ್ಗೆ ರಾಜ್ಯದಲ್ಲಿ ಭಾರೀ ಚೆರ್ಚಯಾಗುತ್ತಿದ್ದು, ಈ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೆಲವೊಂದಿಷ್ಟು ಸಲಹೆಗಳನ್ನು ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಗಳೇ ಈ ಕಡೆ ಗಮನಹರಿಸಿ, ಇದು ನ್ಯಾಯವಲ್ಲವೇ ಎಂದೆಲ್ಲ ಪ್ರಶ್ನಿಸಿದ್ದಾರೆ. ಜೊತೆಗೆ ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ಸಲಹೆ ಕೂಡ ನೀಡಿದ್ದಾರೆ.

ಟ್ವೀಟ್-1:
ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಬಿಎಸ್‍ವೈ ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು. ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಇದರಲ್ಲಿ ಸೇರಿಸಿಕೊಳ್ಳಬಹುದು ಎಂದಿದ್ದಾರೆ.

ಟ್ವೀಟ್-2:
ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ್ಯ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಗಳೇ ಈ ಕಡೆಗಮನ ಹರಿಸಿ ಎಂದು ಬರೆದುಕೊಂಡು ಸಿಎಂ ಆಫ್ ಕರ್ನಾಟಕಕ್ಕೆ ಟ್ಯಾಗ್ ಮಾಡಿದ್ದಾರೆ.

ಟ್ವೀಟ್- 3:
ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ಧ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ, ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಬಿಎಸ್‍ವೈ ಅವರೇ ಇದು ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಟ್ವೀಟ್- 4:
ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು.

Share This Article
Leave a Comment

Leave a Reply

Your email address will not be published. Required fields are marked *