ಕೊರೊನಾ ನಿಯಂತ್ರಣ: ಪ್ರಧಾನಿ ಜೊತೆ 4 ಪ್ರಮುಖ ಬೇಡಿಕೆ ಸಲ್ಲಿಸಿದ ಕರ್ನಾಟಕ

Public TV
1 Min Read
PM modi Meeting corona covid

ಬೆಂಗಳೂರು: ಕೋವಿಡ್‌ 19 ನಿಯಂತ್ರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ಪ್ರಮುಖವಾಗಿ 4 ಬೇಡಿಕೆಯನ್ನು ಸಲ್ಲಿಸಿದೆ.

ವಿಡಿಯೋ ಸಂವಾದದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ಒದಗಿಸಿದರು.

modi ashwathnaryana sudhakar 2

ಸಭೆಯಲ್ಲಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳನಾಡು, ಬಿಹಾರ್, ಗುಜರಾತ್, ಪಂಜಾಬ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಕೋವಿಡ್‌ 19 ನಿಯಂತ್ರಣ – ಪ್ರಧಾನಿಗೆ ರಾಜ್ಯ ಕೈಗೊಂಡ 13 ಕ್ರಮಗಳ ವರದಿ ಒಪ್ಪಿಸಿದ ಸರ್ಕಾರ

ಕರ್ನಾಟಕದ ಬೇಡಿಕೆಗಳು:
1. ಕೋವಿಡ್ ಸಂಬಂಧಿತ ಚಟುವಟಿಕೆಗಳಿಗೆ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಅಂತಿಮ ವರ್ಷದ ಪೂರ್ವದಲ್ಲಿರುವ ಪ್ಯಾರಾ ಮೆಡಿಕಲ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅನುಮತಿ ಕೋರಲಾಯಿತು.

modi ashwathnaryana sudhakar 3

2. ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ವರ್ಷ 10,000 ಪದವಿ ಮತ್ತು 2,000 ಸ್ನಾತಕೋತ್ತರ ಸೀಟುಗಳನ್ನು ಹೆಚ್ಚಿಸಲು ಮನವಿ.

3. ವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕೋರ್ಸು ಮುಗಿದ ನಂತರ ಕಡ್ಡಾಯವಾಗಿ ಸರ್ಕಾರಿ ಸೇವೆ ಸಲ್ಲಿಸಲು ಮಾರ್ಗಸೂಚಿಗಳನ್ನು ಹೊರಡಿಸಲು ಮನವಿ.

4. ಲಿಕ್ವಿಡ್ ಆಕ್ಸಿಜನ್‌ ಘಟಕಗಳನ್ನು ಲಭ್ಯತೆ ಹಾಗೂ ವೈದ್ಯಕೀಯ ಸಂಸ್ಥೆಗಳಲ್ಲಿ ಆರೋಗ್ಯ ಕುರಿತ ಸಂಶೋಧನೆಯನ್ನು ಕಡ್ಡಾಯಗೊಳಿಸುವ ಬಗ್ಗೆ ಮನವಿ.

modi ashwathnaryana sudhakar

ಈ ವೇಳೆ ಮೋದಿ ಮಾತನಾಡಿ, ಕೋವಿಡ್ ಹೆಚ್ಚಾಗಿರುವ ರಾಜ್ಯಗಳಲ್ಲಿ ವಸ್ತುಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಈ ಸಭೆಯನ್ನು ಕರೆಯಲಾಯಿತು.ಪ್ರತಿ ರಾಜ್ಯವೂ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದು, ತಂಡಸ್ಪೂರ್ತಿಯೊಂದಿಗೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಒಟ್ಟಾಗಿ ಈ 10 ರಾಜ್ಯಗಳಲ್ಲಿ ಕೊರೋನಾವನ್ನು ಸಮರ್ಥವಾಗಿ ಎದುರಿಸಿದರೆ ದೇಶವೇ ಈ ಹೋರಾಟದಲ್ಲಿ ಗೆದ್ದಂತೆ. ಸಾಂಕ್ರಾಮಿಕವನ್ನು ಗುರುತಿಸಿ, ತಡೆಗಟ್ಟುವಲ್ಲಿ ಉತ್ತಮ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದ ಅವರು, ಸಕ್ರಿಯ ಪ್ರಕರಣಗಳ ಸಂಖ್ಯೆ ಹಾಗೂ ಗುಣಮುಖರಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಹಾಗೂ ಜನರಲ್ಲಿ ಭೀತಿಯೂ ಕಡಿಮೆ ಮಾಡಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *