– ಬಿಬಿಎಂಪಿಯಿಂದ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ
ಬೆಂಗಳೂರು: ಕೊರೊನಾ ನಿಯಮಗಳನ್ನು ಪಾಲಿಸದ ನಗರದ 7 ಖಾಸಗಿ ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿರುವ ಬಿಬಿಎಂಪಿ, ಆಸ್ಪತ್ರೆಗಳ ಓಪಿಡಿ ಕ್ಲೋಸ್ ಮಾಡಿ, ಒಳರೋಗಿಳನ್ನು ಶಿಫ್ಟ್ ಮಾಡುವ ಎಚ್ಚರಿಕೆಯನ್ನು ನೀಡಿದೆ.
ನೋಟಿಸ್ ಪಡೆದಿರುವ ಆಸ್ಪತ್ರೆಗಳು ಮುಂದಿನ 24 ಗಂಟೆಯಲ್ಲಿ ನೋಟಿಸ್‍ಗೆ ಉತ್ತರಿಸಬೇಕಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಲೈಸನ್ಸ್ ಯಾಕೆ ರದ್ದು ಮಾಡಬಾರದು ಎಂದು ಬಿಬಿಎಂಪಿ ಕೇಳಿದೆ.
Advertisement
Advertisement
ಸರ್ಕಾರದ ನಿಯಮಗಳನ್ನು ಪಾಲಿಸದ ನಗರದ ರಂಗದೊರೈ ಮೆಮೊರಿಯಲ್ ಆಸ್ಪತ್ರೆ, ಸಂಜಿವಿನಿ ಆಸ್ಪತ್ರೆ, ಡಾ. ಜಿವಿಜಿ ಹೆಲ್ತ್ ಕೇರ್ ಪ್ರೈವೆಟ್ ಲಿ., ಶ್ರೀನಿವಾಸ್ ಆಸ್ಪತ್ರೆ, ಮೆಡ್ ಸ್ಟಾರ್ ಆಸ್ಪತ್ರೆ, ನಂದನ ಹೆಲ್ತ್ ಕೇರ್ ಸರ್ವಿಸ್ ಇಂಡಿಯಾ ಲಿಮಿಟೆಡ್ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ.
Advertisement
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನೋಟಿಸ್ ಜಾರಿ ಮಾಡಿದ್ದು, ಶೇ.50 ರಷ್ಟು ಕೋವಿಡ್ ಬೆಡ್ ನೀಡದ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಕೋರಿದ್ದಾರೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ಕೆಪಿಎಂಇ) ಕಾಯ್ದೆ ಅನ್ವಯ ನೋಟಿಸ್ ನೀಡಲಾಗಿದೆ.
Advertisement
ಸೆ.16 ರಂದು ಕೊರೊನಾ ಸೋಂಕಿತರ ಚಿಕಿತ್ಸೆಗೆ ಸಹಕಾರ ನೀಡದ ಮತ್ತು ಸರ್ಕಾರಕ್ಕೆ ಶೇ.50 ರಷ್ಟು ಹಾಸಿಗೆ ನೀಡದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿತ್ತು. ನೋಟಿಸ್‍ನಲ್ಲಿ ಮುಂದಿನ ಮುಂದಿನ 48 ಗಂಟೆಗಳ ಒಳಗಾಗಿ ಸರ್ಕಾರದ ಆದೇಶದಂತೆ ಶೇ.50 ರಷ್ಟು ಹಾಸಿಗೆಗಳನ್ನು ಬಿಟ್ಟು ಕೊಡಬೇಕು. 24 ಗಂಟೆಗಳ ಒಳಗಾಗಿ ಪಾಲಿಕೆಯ ಶೋಕಾಸ್ ನೋಟಿಸ್‍ಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು.
ಸರ್ಕಾರ ಸೂಚನೆಯನ್ನೂ ಪಾಲಿಸದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ, ಕೆಂಗೇರಿಯ ಸಂತೋಷ್ ಆಸ್ಪತ್ರೆ, ವರ್ತೂರಿನ ಸಕ್ರಾ ಆಸ್ಪತ್ರೆ ಹಾಗೂ ಓಲ್ಡ್ ಏರ್‍ಪೋರ್ಟ್ ರಸ್ತೆಯಲ್ಲಿನ ಶುಶ್ರೂಷಾ ಆಸ್ಪತ್ರೆ ಮೇಲೆ ಎಫ್‍ಐಆರ್ ದಾಖಲಾಗಿತ್ತು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಮೂರು ಆಸ್ಪತ್ರೆಗಳ ಮೇಲೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ಕೆಪಿಎಂಇ) ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.
ನೋಟಿಸ್ ನೀಡಿದ್ದು ಯಾಕೆ?
ಸೋಂಕಿತರ ಚಿಕಿತ್ಸೆಗೆ ಆನ್‍ಲೈನ್ ಪೋರ್ಟ್‍ನಲ್ಲಿ ಹಾಸಿಗೆ ಬ್ಲಾಕ್ ಮಾಡಿದರೂ, ದಾಖಲಿಸುವ ವೇಳೆ ಆಸ್ಪತ್ರೆಯಲ್ಲಿ ಹಾಸಿಗೆಗಳು ಖಾಲಿ ಇಲ್ಲ ಎಂದು ಹೇಳಿ ಚಿಕಿತ್ಸೆಗೆ ನಿರಾಕರಿಸಲಾಗುತ್ತಿತ್ತು. ಅಲ್ಲದೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್(ಎಸ್‍ಎಎಸ್‍ಟಿ) ಪೋರ್ಟಲ್‍ನಲ್ಲಿ ವಿವರವಾದ ಮಾಹಿತಿ ನೀಡಿಲ್ಲ ಎಂದು ನೋಟಿಸ್ ನೀಡಲಾಗಿತ್ತು.