ಮಡಿಕೇರಿ: ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಲಾಕ್‍ಡೌನ್ ಮಾಡುವುದು ಸೂಕ್ತ ಎಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯ ಪಟ್ಟಿದ್ದಾರೆ.
ಕೊಡಗಿನ ಕುಟ್ಟ ಚಕ್ ಪೋಸ್ಟ್ ಬಳಿ ಮಾತಾನಾಡಿದ ಅವರು, ಈಗಾಗಲೇ ರಾಜ್ಯದ ಗಡಿ ಭಾಗದಲ್ಲಿ ಸಾಕಷ್ಟು ಟೈಟ್ ಮಾಡಿದ್ದಾರೆ, ಸೋಂಕಿನ ಪ್ರಕರಣಗಳು ಹೆಚ್ಚಾದರೆ ಕಳೆದ ಬಾರಿಯಂತೆ ವೀಕೆಂಡ್ ಲಾಕ್‍ಡೌನ್ ಮಾಡಬೇಕಾಗುವ ಸಾಧ್ಯತೆ ಬರಬಹುದು. ಇದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆ ಅಗಬಹುದು. ಸದ್ಯದಲ್ಲೇ ರಾಜ್ಯ ಸರ್ಕಾರ ಮಾಡಬಹುದು ನಾನು ಕೂಡ ವೀಕೆಂಡ್ ಲಾಕ್‍ಡೌನ್ ಮಾಡುವುದು ಸೂಕ್ತ ಎಂದು ಸರ್ಕಾರಕ್ಕೆ ಸಲಹೆ ಕೋಡುತ್ತೇನೆ ಎಂದರು. ಇದನ್ನೂ ಓದಿ: ಕರಾವಳಿಯಲ್ಲಿ ಕೊರೊನಾ ಹೆಚ್ಚಳ- ಜನರಿಗೆ ಸಿಗುತ್ತಿಲ್ಲ ಲಸಿಕೆ
ಕೊಡಗು ಜಿಲ್ಲೆಯಲ್ಲಿ ಪಾಸಿಟಿವ್ ರೇಟ್ ಶೇ.5ಕ್ಕೆ ತಲುಪಿಲ್ಲ, ಈಗಲೂ ಜಿಲ್ಲೆ ಕೋವಿಡ್ ನಿಯಂತ್ರಣದಲ್ಲಿದೆ. ಪಾಸಿಟಿವ್ ರೇಟ್ 5 ಮೇಲೆ ಹೋಗಬರದು ಎಂದು ಸಾಕಷ್ಟು ಶ್ರಮ ಪಡುತ್ತಿದ್ದಾರೆ. ಮುಖ್ಯಮಂತ್ರಿಗಳು ದೆಹಲಿಯಿಂದ ಬರುತ್ತಿದ್ದಂತೆ ಮತ್ತೆ ಕೋವಿಡ್ ನಿಯಂತ್ರಣದ ಬಗ್ಗೆ ಸಭೆ ನಡೆಸಲ್ಲಿದ್ದಾರೆ. ಎಲ್ಲ ಜಿಲ್ಲೆಗಳ ವರದಿ ತರಿಸಿಕೊಂಡು ಎನು ಮಾಡಬಹುದು ಎಂದು ಸೂಚನೆ ನೀಡುತ್ತಾರೆ ಎಂದರು.
ಈಗಾಗಲೇ ಕೊಡಗು ಜಿಲ್ಲೆಯು ಹೈರಿಸ್ಕ್ ಎಂದು ಹೇಳಲಾಗುತ್ತಿದೆ. ಹೀಗಾಗಿ ವರದಿ ತರಿಸಿಕೊಂಡು ಮಾರ್ಗಸೂಚಿಗಳನ್ನು ನೀಡಬಹುದು. ಅದನ್ನು ಎಲ್ಲರೂ ಪಾಲಸಬೇಕಾಗುತ್ತದೆ. ಈಗಾಗಲೇ ನಾಗರಹೊಳೆ ಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು, ಕೇರಳದ ಮೂಲದವರು ಬಂದು ಹೋಗುತ್ತಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಅಲ್ಲಿನ ಅರಣ್ಯ ಇಲಾಖೆಯ ಆಧಿಕಾರಿಗಳಿಗೆ ತಪಾಸಣೆ ಮಾಡಬೇಕು. ಆರ್ ಟಿಪಿಸಿಆರ್ ವರದಿ ಇದ್ದರೆ ಮಾತ್ರ ಒಳಗೆ ಬೀಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.