ಬೆಂಗಳೂರು: ಇಂದಿನಿಂದ ದೇಶಾದ್ಯಂತ ಕೊರೊನಾ ಲಸಿಕೆಯ ಮಹಾಯಜ್ಞ ಶುರುವಾಗಲಿದೆ. ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10.30ಕ್ಕೆ ಚಾಲನೆಗೆ ನೀಡಲಿದ್ದಾರೆ. ಅಲ್ಲದೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮೊದಲ ದಿನವಾದ ಇಂದು ದೇಶಾದ್ಯಂತ 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಪುಣೆಯ ಸೆರಮ್ ಇನ್ಸಿಟಿಟ್ಯೂಟ್ ತಯಾರಿಸಿರೋ ‘ಕೊವಿಶೀಲ್ಡ್’ ಲಸಿಕೆಯ ಮೊದಲ ಡೋಸ್ ಪಡೆಯಲಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಮತ್ತು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ವ್ಯಾಕ್ಸಿನ್ ಹಂಚಿಕೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನೆ ಮಾಡಲಿದ್ದಾರೆ.
Advertisement
Advertisement
ಕೊರೊನಾ ವ್ಯಾಕ್ಸಿನೇಷನ್‍ಗೆ ರಾಜ್ಯ ಸಜ್ಜಾಗಿದೆ. ರಾಜ್ಯದಲ್ಲಿ 243 ಹಾಗೂ ಬೆಂಗಳೂರಿನ 10 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಸಿಎಂ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ ಅಂತ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಅಲ್ಲದೆ ಲಸಿಕೆ ತೆಗೆದುಕೊಂಡ ನಂತರ ಕೆಲವರಿಗೆ ಸೈಡ್ ಎಫೆಕ್ಟ್ ಆಗಬಹುದು. ಸ್ಪಲ್ಪ ಜ್ವರ ಬರಬಹುದು. ಆಮೇಲೆ ಅದೇ ಸರಿ ಹೋಗುತ್ತೆ. ಆತಂಕಕ್ಕೆ ಒಳಗಾಗಬಾರದು ಅಂತ ಹೇಳಿದ್ದಾರೆ.
Advertisement
Advertisement
ಆರೋಗ್ಯ ಇಲಾಖೆಯ ಗ್ರೂಪ್ ಡಿ ನೌಕರರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಸಾಂಕೇತಿಕವಾಗಿ ಮೊದಲು ಲಸಿಕೆ ನೀಡಲಾಗುತ್ತದೆ ಅಂತ ಸುಧಾಕರ್ ವಿವರಿಸಿದ್ದಾರೆ. ಬೆಂಗಳೂರಿನ 8 ಲಸಿಕಾ ಕೇಂದ್ರದಲ್ಲಿ ಒಟ್ಟು 800 ಜನ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗ್ತಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಾವೇ ಮೊದಲ ವ್ಯಾಕ್ಸಿನ್ ತೆಗೆದುಕೊಳ್ಳೋದಾಗಿ ಖ್ಯಾತ ವೈದ್ಯ, ಟಾಸ್ಕ್ ಫೋರ್ಸ್ ಸಮಿತಿ ಮುಖ್ಯಸ್ಥರಾಗಿರೋ ಡಾ. ಸುದರ್ಶನ್ ಬಲ್ಲಾಳ್ ಹೇಳಿದ್ದಾರೆ.