ನೆಲಮಂಗಲ(ಬೆಂಗಳೂರು): ಕೊರೊನಾ ಮೂರನೇ ಅಲೆಯ ಆತಂಕದ ನಡುವೆ ವ್ಯಾಕ್ಸಿನ್ ಗಾಗಿ ಹಾಹಾಕಾರ ಶುರುವಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಮುಂದಿನ ಸರ್ಕಾರಿ ಶಾಲೆಯಲ್ಲಿನ ವ್ಯಾಕ್ಸಿನ್ ಕೇಂದ್ರದ ಮುಂದೆ ಹಾಹಾಕಾರ ಶುರುವಾಗಿದ್ದು, ಲಸಿಕೆ ಸಿಗದೆ ಜನರು ಪರದಾಡುವಂತಾಗಿದೆ.
Advertisement
ಇಂದು ಮೊದಲ ಡೋಸ್ ವ್ಯಾಕ್ಸಿನ್ ಪಡೆಯುವವರಿಗೆ ಮಾತ್ರ ವ್ಯಾಕ್ಸಿನ್ ನೀಡಲಾಗುತ್ತದೆ. ನಾಳೆ ವ್ಯಾಕ್ಸಿನ್ ಲಭ್ಯವಿಲ್ಲ ಎಂಬ ನಾಮಫಲಕ ಹಾಕಿದ ಅಧಿಕಾರಿಗಳು, ಕೋವಿಶೀಲ್ಡ್ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ವ್ಯಾಕ್ಸಿನ್ ಬಂದ ಕೂಡಲೇ ಜನರು ಓಡೋಡಿ ಬಂದು ವ್ಯಾಕ್ಸಿನ್ ಕೇಂದ್ರದ ಮುಂದೆ ನೂಕುನುಗ್ಗಲು ಉಂಟಾಗಿದ್ದು, ಜನಸಾಮಾನ್ಯರು ವ್ಯಾಕ್ಸಿನ್ ಸಮರ್ಪಕವಾಗಿ ಪೂರೈಕೆ ಆಗದ ಹಿನ್ನೆಲೆಯಲ್ಲಿ ಪರದಾಡುವಂತಾಗಿದೆ. ಇದನ್ನೂ ಓದಿ: ನಿನ್ನೆ ಬಿಎಸ್‍ವೈ, ಇಂದು ಡಿಕೆಶಿ – ದೇಗುಲಗಳಲ್ಲಿ ರಾಜಕಾರಣಿಗಳಿಗಿಲ್ವಾ ಕೊರೊನಾ ರೂಲ್ಸ್?
Advertisement
Advertisement
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತೀ ಕಡಿಮೆ ವ್ಯಾಕ್ಸಿನ್ ನೆಲಮಂಗಲ ತಾಲೂಕಿಗೆ ಪೂರೈಕೆಯಾಗುತ್ತಿದೆ. ಹೀಗಾಗಿ ಕೂಡಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಸಮರ್ಪಕವಾಗಿ ವ್ಯಾಕ್ಸಿನ್ ಪೂರೈಕೆ ಮಾಡುವಂತೆ ಜನರು ಆಗ್ರಹಿಸಿದ್ದಾರೆ.
Advertisement