ಯಾದಗಿರಿ: ಕೊರೊನಾ ಮೂರನೇ ಅಲೆ ಎದುರಿಸಲು ಯಾದಗಿರಿ ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಮೂರನೇ ಅಲೆ ಮಕ್ಕಳಿಗೆ ಡೇಂಜರ್ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹೈಟೆಕ್ ತಂತ್ರಕ್ಕೆ ಮುಂದಾಗಿದೆ. ಜಿಲ್ಲಾ ಪಂಚಾಯತಿ ಸಿಇಓ ಶಿಲ್ಪಾ ಶರ್ಮಾ ಇದಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ.
Advertisement
ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗಾಗಿ ವಿಶೇಷ ವಾರ್ಡ್ ಆರಂಭಿಸಲಾಗಿದೆ. ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆ ಇಲ್ಲದ ಸೌಲಭ್ಯ ಇಲ್ಲಿ ನೀಡಲಾಗುತ್ತಿದೆ. ಯಾದಗಿರಿ ಜಿಲ್ಲೆಯಲ್ಲಿನ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಅಪೌಷ್ಟಿಕತೆ ಹೆಚ್ಚಾಗಿದ್ದು, ಇದನ್ನು ನಿವಾರಣೆ ಮಾಡಲು ವಿಭಿನ್ನ ಪ್ರಯತ್ನಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಅಪೌಷ್ಟಿಕತೆ ಸಮಸ್ಯೆಯಿಂದ ಮಕ್ಕಳನ್ನು ಆಸ್ಪತ್ರೆ ಕರೆತರುವ ನಿಟ್ಟಿನಲ್ಲಿ, ಒಟ್ಟು 14 ದಿನ ಇರುವ ಮಕ್ಕಳಿಗೆ ನಿತ್ಯ 270 ರೂ. ಅವರ ಪಾಲಕರಿಗೆ 285 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಅಲ್ಲದೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಊಟ, ಟಿವಿ, ಆಟ ಎಲ್ಲಾ ಸೌಲಭ್ಯ ಸಹ ಒದಗಿಸಲಾಗಿದೆ. ಇದನ್ನೂ ಓದಿ: ಕಾಮಗಾರಿಗಳ ಅಸಮರ್ಪಕ ನಿರ್ವಹಣೆ – ಅಧಿಕಾರಿಗಳಿಗೆ ಸಿಇಓ ಶಿಲ್ಪಾ ಶರ್ಮಾ ಕ್ಲಾಸ್
Advertisement
Advertisement
ಯಾದಗಿರಿ ಹಳೆ ಜಿಲ್ಲಾಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳಿಗಾಗಿ ಈ ವಿಶೇಷ ವಾರ್ಡ್ ಆರಂಭವಾಗಿದೆ. ರಾಷ್ಟ್ರೀಯ ಆರೋಗ್ಯ ಯೋಜನೆ, ಜಿಲ್ಲಾ ಪಂಚಾಯತ, ಜಿಲ್ಲಾಡಳಿತ ನೇತೃತ್ವದಲ್ಲಿ ಅಭಿಯಾನ ಆರಂಭಿಸಲಾಗಿದೆ. ಆರೋಗ್ಯ ,ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಇದಕ್ಕೆ ಸಾಥ್ ನೀಡಿವೆ.