ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಮಿಂಚಿನ ವೇಗದಲ್ಲಿ ಕೊರೊನಾ ಹರಡುತ್ತಿದ್ದು, ನಿತ್ಯ 10 ಸಾವಿರಕ್ಕೂ ಅಧಿಕ ಪ್ರಕರಣಗಳು ನಗರದಲ್ಲಿ ವರದಿಯಾಗುತ್ತಿವೆ. ಸರ್ಕಾರ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಪಬ್, ಬಾರ್‍ಗಳಲ್ಲಿ ಇದ್ಯಾವುದೂ ಪಾಲನೆಯಾಗುತ್ತಿಲ್ಲ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ನಂಗಾನಾಚ್ ಮಾಡಲಾಗುತ್ತಿದೆ.
Advertisement
ಸರ್ಕಾರದ ನಿಯಮಗಳಿಗೆ ನಗರದ ಪಬ್, ಬಾರ್ ಗಳಲ್ಲಿ ಕಿಮ್ಮತ್ತು ಇಲ್ಲದಂತಾಗಿದ್ದು, ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಶೇ.50ರಷ್ಟು ಜನರ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಪಬ್, ಬಾರ್ ಗಳಲ್ಲಿ ಗ್ರಾಹಕರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಪಬ್ ಗಳಲ್ಲಿ ಡ್ಯಾನ್ಸ್ ಗರ್ಲ್ಸ್ ಮುಖದಲ್ಲಿ ಮಾಸ್ಕ್ ಮಾಯವಾಗಿದ್ದು, ಸಾಮಾಜಿಕ ಅಂತರವಂತೂ ಮರೀಚಿಕೆಯಾಗಿದೆ.
Advertisement
Advertisement
ಪಬ್ ಗಳಲ್ಲಿ ಕೊರೊನಾ ರೂಲ್ಸ್ ಬ್ರೇಕ್ ಮಾಡಿ ನಡೆಯುತ್ತಿರುವ ಘಟನೆಗಳ ಬಗ್ಗೆ ರೋಲ್ಯಾನ್ಸ್ ಸೊನ್ಸ್ ಅವರಿಂದ ಪಿಂಗಾರ ರೆಸ್ಟೊರೆಂಟ್ ಆ್ಯಂಡ್ ಬಾರ್ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಂಗಾರ ರೆಸ್ಟೋರೆಂಟ್ ಆ್ಯಂಡ್ ಬಾರ್ ವಿರುದ್ಧ ದೂರು ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.