ತಿರುವನಂತಪುರ: ಕಾಂಗ್ರೆಸ್ ಪಕ್ಷ ನಡೆಸಿದ ಸಮಾರಂಭವೊಂದರಲ್ಲಿ ಕಾರ್ಯಕರ್ತರು ಕೊರೊನಾ ನಿಯಮ ಗಾಳಿಗೆ ತೂರಿದ್ದಾರೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡದೆ ಇದ್ದ 100 ಮಂದಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇರಳ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ.
Advertisement
ಕೇರಳದಲ್ಲಿ ಕೊರೊನಾ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಠಿಣ ನಿಯಮಗಳನ್ನು ತೆಗೆದುಕೊಂಡಿದೆ. ಈ ನಡುವೆ ಕೇರಳದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಕೆ. ಸುಧಾಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕಾಗಿ ಸಮಾರಂಭವೊಂದಂದನ್ನು ತಿರುವನಂತಪುರದ ಇಂದಿರಾ ಭವನದಲ್ಲಿ ಕಾಂಗ್ರೆಸ್ ನಡೆಸಿತ್ತು. ಈ ಸಮಾರಂಭದಲ್ಲಿ 100ಕ್ಕೂ ಹೆಚ್ಚು ಕಾರ್ಯಕರ್ತರು ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಪಾಲಿಸದೆ ಇದ್ದ ಪರಿಣಾಮ ತಿರುವನಂತಪರದ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನೂರು ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ಗೆ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಎಂಟ್ರಿ
Advertisement
കെപിസിസി അധ്യക്ഷനായി ചുമതലയേറ്റെടുത്ത ശേഷം ശ്രീ കെ.സുധാകരൻ എം പി സംസാരിക്കുന്നു @SudhakaranINC https://t.co/xasB9X9fHB
— Congress Kerala (@INCKerala) June 16, 2021
Advertisement
ಈ ಕುರಿತು ಸ್ಪಷ್ಟನೆ ನೀಡಿರುವ ಮ್ಯೂಸಿಯಂ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ, ಕಾಂಗ್ರೆಸ್ ಪಕ್ಷದ ಸಮಾರಂಭದಲ್ಲಿ ಕೇರಳದಲ್ಲಿರುವ ಕೊರೊನಾ ನಿಯಮವನ್ನು ಗಾಳಿಗೆ ತೂರಿದ್ದಾರೆ. ಸಭೆಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಅಗದ ಹಿನ್ನೆಲೆ ಕೇರಳ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
Advertisement