ನವದೆಹಲಿ: ಕೋವಿಶೀಲ್ಡ್ ಕೋವಿಡ್ ಲಸಿಕೆ ಪಡೆದ ಬಳಿಕ ಆರೋಗ್ಯ ಸಮಸ್ಯೆಯಾಗಿದೆ ಎಂದು ದೂಷಿಸಿದ ವ್ಯಕ್ತಿಯ ವಿರುದ್ಧ ಸೀರಂ ಇನ್‌ಸ್ಟಿಟ್ಯೂಟ್ 100 ಕೋಟಿ ರೂ. ಮಾನನಷ್ಟ ಕೇಸ್ ಹೂಡಿದೆ.
ಚೆನ್ನೈ ಮೂಲದ 40 ವರ್ಷದ ಸ್ವಯಂಸೇವಕರೊಬ್ಬರು ಕೋವಿಶೀಲ್ಡ್ ಲಸಿಕೆಯನ್ನು ಪಡೆದುಕೊಂಡಿದ್ದರು. ಲಸಿಕೆ ಪಡೆದ ಬಳಿಕ ನನಗೆ ತಲೆ ಸಿಡಿತ ಕಾಣಿಸಿಕೊಂಡಿದೆ. ಹೀಗಾಗಿ ನನಗೆ ಸೀರಂ ಸಂಸ್ಥೆ 5 ಕೋಟಿ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದರು.
Advertisement
Advertisement
ಈ ವಿಚಾರಕ್ಕೆ ಪ್ರತಿಕ್ರಿಯಿಸಿದರುವ ಸೀರಂ ಕಂಪನಿ ಲಸಿಕೆ ಪರೀಕ್ಷೆಗೆ ಒಳಗಾದ ಸ್ವಯಂಸೇವಕನ ಆರೋಗ್ಯ ಸ್ಥಿತಿಗೂ ಕೋವಿಡ್ ಲಸಿಕೆಗೆ ಯಾವುದೇ ಸಂಬಂಧವಿಲ್ಲ. ಇದು ದೂರುದ್ದೇಶಪೂರಿತ ಆರೋಪವಾಗಿದ್ದು ತನ್ನ ಆರೋಗ್ಯ ಸಮಸ್ಯೆಗೆ ಈ ಲಸಿಕೆಯನ್ನು ದೂಷಿಸುತ್ತಿದ್ದಾನೆ ಎಂದು ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
Advertisement
ಸುಳ್ಳು ಆರೋಪ ಮಾಡಿ ಸಂಸ್ಥೆಯ ಘನತೆಗೆ ಧಕ್ಕೆ ತಂದಿದ್ದಕ್ಕೆ ಸೀರಂ ಕಂಪನಿ 100 ಕೋಟಿ ರೂ. ಕ್ರಿಮಿನಲ್ ಮಾನನಷ್ಟ ಕೇಸ್ ಹೂಡಿದ್ದು ಇಂದು ಸ್ವಯಂಸೇವಕನಿಗೆ ನೋಟಿಸ್ ಜಾರಿಯಾಗುವ ಸಾಧ್ಯತೆಯಿದೆ.
Advertisement
ಸೀರಂ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ವಿಶ್ವ ಪ್ರಸಿದ್ಧ ಸಂಸ್ಥೆಯ ವಿರುದ್ಧ ಹಣ ಪಡೆಯಲು ಸುಳ್ಳು ಆರೋಪ ಮಾಡಿದ್ದಾನೆ. ಸ್ವಯಂಸೇವಕನ ಮೇಲೆ ಈಗಾಗಲೇ ಪ್ರಯೋಗ ನಡೆಸಿ ಹಲವು ದಿನಗಳು ನಡೆದಿದೆ. ಈಗ ಸಂಪೂರ್ಣವಾಗಿ ಚೇತರಿಕೆಯಾಗಿದ್ದಾನೆ ಎಂದು ತಿಳಿಸಿದ್ದಾರೆ.
ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ (ಐಸಿಎಂಆರ್) ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, ಸ್ವಯಂಸೇವಕನ ಆರೋಪದ ಹಿನ್ನೆಲೆಯಲ್ಲಿ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದು, ಸ್ವಯಂ ಸೇವಕನ ಆರೋಗ್ಯ ಸಮಸ್ಯೆಗೂ ಲಸಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.
ಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಜೊತೆಯಾಗಿ ಕೋವಿಶೀಲ್ಡ್ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ್ದು, ಪುಣೆಯ ಸೀರಂ ಇನ್‌ಸ್ಟಿಟ್ಯೂಟ್‌ನಲ್ಲಿ ತಯಾರಾಗುತ್ತಿದೆ.