ತುಮಕೂರು: ಇಂದು ಸಿದ್ದಗಂಗಾ ಶ್ರೀಗಳು ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.
ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಮಠದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಕೊರೊನಾ ಲಸಿಕೆ ಪಡೆದುಕೊಂಡರು. ಕೆಲ ದಿನಗಳ ಹಿಂದೆ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಕೊರೊನಾ ಲಸಿಕೆ ಪಡೆದುಕೊಂಡು, ಸಾರ್ವಜನಿಕರು ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.
ಮಹಾಮಾರಿ ತಡೆಗಾಗಿ ಸರ್ಕಾರ ಜನವರಿ 16ರಂದು ಕೊರೊನಾ ಲಸಿಕೆ ಕಾರ್ಯಕ್ರಮ ಆರಂಭಿಸಿದೆ. ಮಾರ್ಚ್ 1ರಿಂದ ಹಿರಿಯ ನಾಗರಿಕರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಎರಡನೇ ಡೋಸ್ ಮಾರ್ಚ್ 1ರಿಂದ ಆರಂಭಿಸಲಾಗಿತ್ತು.