– ವಿಶೇಷ ಪ್ಯಾಕೇಜ್‍ನ ಫಲಾನುಭವಿಗಳು ಯಾರು..?
– ಮೇ 23ರಂದು ಲಾಕ್ ಡೌನ್ ಬಗ್ಗೆ ನಿರ್ಧಾರ
– ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವ್ರಿಗೂ 5 ಕೆ.ಜಿ ಅಕ್ಕಿ
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಣೆ ಸರ್ಕಾರ ಮಾಡಿದೆ. ಕೆಲವಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿತ್ತು ಎಂದರು.
Advertisement
Advertisement
ಇದೇ ವೇಳೆ 1, 250 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ ಸಿಎಂ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ 10 ಸಾವಿರ, ಹಣ್ಣು ತರಕಾರಿ ಬೆಳೆಗೆ ಒಂದು ಹೆಕ್ಟೇರ್ ಗೆ ಕನಿಷ್ಠ 10 ಸಾವಿರ ಸಹಾಯಧನ, ಆಟೋ, ಕ್ಯಾಬ್ ಚಾಲಕ 3 ಸಾವಿರ, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ, ಅಗಸ, ಚಮ್ಮಾರ, ಕಮ್ಮಾರ ಸೇರಿದಂತೆ ಅಸಂಘಟಿತರಿಗೆ 2 ಸಾವಿರ, ರಸ್ತೆಬದಿ ವ್ಯಾಪಾರಿಗಳಿಗೆ 2 ಸಾವಿರ, ರಸ್ತೆ ಬದಿಯ ವ್ಯಾಪಾರಿಗಳಿಗೆ 2 ಸಾವಿರ, ಕಲಾವಿದರು, ಕಲಾ ತಂಡಕ್ಕೆ 3 ಸಾವಿರ ಹಾಗೂ ಸಾಲ ಮರುಪಾವತಿಗೆ 3 ತಿಂಗಳ ಅವಕಾಶ ಇದ್ದು, 3 ತಿಂಗಳ ಬಡ್ಡಿ ಸರ್ಕಾರವೇ ಭರಿಸಲಿದೆ ಎಂದರು.
Advertisement
Advertisement
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ 5 ಕೆಜಿ ಅಕ್ಕಿ ನೀಡಲಾಗುವುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ರೇಷನ್ ಕೊಡಲಾಗುತ್ತದೆ. ಅಲ್ಲದೆ ಮೇ, ಜೂನ್ ರೇಷನ್ ಕೊಡಲಾಗುತ್ತೆ. ಪ್ಯಾಕೇಜ್ ನಲ್ಲಿ ಕಳೆದ ವರ್ಷದಂತೆ ಲೋಪ ಆಗದಂತೆ ಕ್ರಮವಹಿಸಲಾಗುತ್ತೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ 23 ರಂದು ತೀರ್ಮಾನ ಮಾಡ್ತೀವಿ ಎಂದು ಸಿಎಂ ತಿಳಿಸಿದರು.
ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗಿದೆ. ಈವರೆಗೆ 2.6 ಲಕ್ಷ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದೆ. ಇದಕ್ಕಾಗಿ 956 ಕೋಟಿ ಖರ್ಚು ಮಾಡಲಾಗುತ್ತದೆ. ಪ್ರತಿ ಪಂಚಾಯತಿಗೆ ಕೋವಿಡ್ ನಿರ್ವಹಣೆಗೆ 50 ಸಾವಿರ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಲೈನ್ ಮ್ಯಾನ್, ಗ್ಯಾಸ್ ತಲುಪಿಸೋರು, ಶಿಕ್ಷಕರು ಫ್ರಂಟ್ ಲೈನ್ ವರ್ಕರ್ಸ್ ಅಂತ ಸಿಎಂ ಘೋಷಣೆ ಮಾಡಿದರು.