– ಸುಶಾಂತ್ ನಟನೆಯ ಹಾಡಿಗೆ ನೃತ್ಯ
ಭೋಪಾಲ್: ಕೊರೊನಾ ವರದಿ ನೆಗೆಟಿವ್ ಬಂದಿದಕ್ಕೆ ಇಡೀ ಕುಟುಂಬದ ಸದಸ್ಯರು ಐಸೊಲೇಷನ್ ವಾರ್ಡಿನಲ್ಲಿ ಮಸ್ತ್ ಡ್ಯಾನ್ಸ್ ಮಾಡಿರುವ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ.
ಕೊರೊನಾ ಐಸೊಲೇಷನ್ ವಾರ್ಡಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 8 ಜನರು ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ವಿಶೇಷವೆಂದರೆ ಅವರು ಮೃತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಚಿಂಚೋರೆ ಸಿನಿಮಾದ ಹಾಡಿಗೆ ನೃತ್ಯ ಮಾಡಿದ್ದಾರೆ.
In Katni, family celebrates successfully defeating #COVID19India infection by dancing to tunes of a Bollywood song, before being discharged @ndtvindia @ndtv @GargiRawat @ShonakshiC #Corona #covid pic.twitter.com/Yzs3B1AFgd
— Anurag Dwary (@Anurag_Dwary) August 18, 2020
ಈ ವಿಚಾರದ ಬಗ್ಗೆ ಮಾತನಾಡಿರುವ ಕಟ್ನಿ ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಯಶವಂತ್ ವರ್ಮಾ, ಆಗಸ್ಟ್ 8ರಂದು ಈ ಕುಟುಂಬದ 19 ಮಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅವರು ನಮ್ಮ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆಗಸ್ಟ್ 15ರಂದು ಅವರಿಗೆ ಕೊರೊನಾ ನೆಗೆಟಿವ್ ಬಂದ ಕಾರಣ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಕುಟುಂಬದವರು ಯಾವಾಗ ಈ ರೀತಿ ನೃತ್ಯ ಮಾಡಿದರು ಎಂಬುದು ನಮಗೆ ಗೊತ್ತಿಲ್ಲ ಎಂದಿದ್ದಾರೆ.
ಮಧ್ಯಪ್ರದೇಶದಲ್ಲಿ ಈವರೆಗೆ 46 ಸಾವಿರಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಇವರ ಪೈಕಿ 35 ಸಾವಿರಕ್ಕೂ ಹೆಚ್ಚು ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಸೇರಿದಂತೆ ಅವರ ಮಂತ್ರಿ ಮಂಡಲದ ನಾಲ್ವರು ಮಂತ್ರಿಗಳು ಕೊರೊನಾ ಪಾಸಿಟಿವ್ ಬಂದಿದ್ದು, ಇದರಲ್ಲಿ ಮುಖ್ಯಮಂತ್ರಿ ಮತ್ತು ಮೂವರು ಮಂತ್ರಿಗಳು ಕೊರೊನಾದಿಂದ ಗುಣಮುಖರಾಗಿದ್ದಾರೆ.