ಚಾಮರಾಜನಗರ: ಕಂಟೈನ್ಮೆಂಟ್ ಝೋನ್‍ಗೆ ಬಂದರೆ ಮಚ್ಚು, ಲಾಂಗ್ ತರುತ್ತೇವೆ ಎಂದು ಕೊರೊನಾ ವಾರಿಯರ್ಸ್ ಗೆ ಜೀವ ಬೆದರಿಕೆ ಹಾಕಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ಕೊಲೆ ಬೆದರಿಕೆ ಹಾಕುಲಾಗುತ್ತಿದೆ ರಕ್ಷಣೆ ಬೇಕು ಎಂದು ನರ್ಸ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗುಂಡ್ಲುಪೇಟೆಯಲ್ಲಿ ನಡೆದ ಪುನಶ್ಚೇತನ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಕೊರೊನಾ ವಾರಿಯರ್ಸ್ ಗೆ ತೊಂದರೆಯಾದರೆ ಜಿಲ್ಲಾಡಳಿತ ಸುಮ್ಮನೆ ಕೂರುವುದಿಲ್ಲ, ಜೀವದ ಹಂತು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಅವರಗೆ ಬೆದರಿಕೆ ಹಾಕಿದರೆ ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
Advertisement
Advertisement
ವಿಪತ್ತು ನಿರ್ವಹಣೆ ಸೆಕ್ಷನ್ 51ರ ಅಡಿ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಈ ಮೂಲಕ ಕೊರೊನಾ ವಾರಿಯರ್ಸ್ ರಕ್ಷಣೆಗೆ ಮುಂದಾಗಿದ್ದಾರೆ. ಕೊರೊನಾ ವಾರಿಯರ್ಸ್‍ಗಳ ಮೇಲೆ ಹಲ್ಲೆ ಹಾಗೂ ಜೀವ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಂಡಿದ್ದಾರೆ.