ನವದೆಹಲಿ: ದೇಶದ ನಾಲ್ಕು ರಾಜ್ಯಗಳಿಗೆ ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್ ನಿಂದ ಪ್ರಧಾನಿ ಮೋದಿಯವರ ಫೋಟೋವನ್ನು ತೆಗೆದು ಹಾಕುವಂತೆ ಚುನಾವಣಾ ಆಯೋಗ ಕೇಂದ್ರಕ್ಕೆ ಸೂಚನೆ ನೀಡಿದೆ.
Advertisement
ಪಂಚ ರಾಜ್ಯಗಳಾದ ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಮಾರ್ಚ್ 27ರಿಂದ ನಡೆಯಲಿದೆ. ಈಗಾಗಲೇ ಐದು ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಐದು ರಾಜ್ಯಗಳಲ್ಲಿ ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್ ನಿಂದ ಮೋದಿ ಭಾವಚಿತ್ರವನ್ನು ತೆಗೆದು ಹಾಕುವಂತೆ ಆಯೋಗ ಸೂಚಿಸಿದೆ.
Advertisement
Advertisement
ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್‍ನಲ್ಲಿ ಮೋದಿ ಅವರ ಫೋಟೋ, ಹೆಸರು ಮತ್ತು ಸಂದೇಶವನ್ನು ನಮೂದಿಸುವ ಮೂಲಕ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರಿನ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಚುನಾವಣಾಧಿಕಾರಿಯಿಂದ ಈ ಕುರಿತು ವರದಿ ನೀಡುವಂತೆ ಸೂಚಿಸಿತ್ತು.
Advertisement
ಇದೀಗ ಚುನಾವಣಾ ಆಯೋಗ ಕೇಂದ್ರ ಆರೋಗ್ಯ ಇಲಾಖೆಗೆ ಮೋದಿ ಫೋಟೋವನ್ನು ವ್ಯಾಕ್ಸಿನ್ ಸರ್ಟಿಫಿಕೇಟ್ ನಿಂದ ತೆಗೆಯುವಂತೆ ಸೂಚಿಸಿದೆ. ಹಾಗೂ ಇತರ ರಾಜ್ಯಗಳಲ್ಲಿ ವ್ಯಾಕ್ಸಿನ್ ಸರ್ಟಿಫಿಕೇಟ್ ನಲ್ಲಿ ಮೋದಿ ಫೋಟೋ ಬಳಕೆಗೆ ಅನುಮತಿ ನೀಡಿದೆ.
ದೇಶದಾದ್ಯಂತ ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮ ಚಾಲ್ತಿಯಲ್ಲಿದೆ. ಹಾಗೆಯೇ ಇತ್ತ ದೇಶದಲ್ಲಿ ಪಂಚ ರಾಜ್ಯಗಳ ಚುನಾವಣೆ ಕೂಡ ರಂಗೇರುತ್ತಿದೆ.