Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಸೋಂಕಿತೆಯ ಪತಿಯೊಂದಿಗೆ ಸಂಪರ್ಕ: ಹೊಲದಲ್ಲೆ ಕೂಲಿ ಕಾರ್ಮಿಕರಿಬ್ಬರು ಕ್ವಾರಂಟೈನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಕೊರೊನಾ ಸೋಂಕಿತೆಯ ಪತಿಯೊಂದಿಗೆ ಸಂಪರ್ಕ: ಹೊಲದಲ್ಲೆ ಕೂಲಿ ಕಾರ್ಮಿಕರಿಬ್ಬರು ಕ್ವಾರಂಟೈನ್

Chamarajanagar

ಕೊರೊನಾ ಸೋಂಕಿತೆಯ ಪತಿಯೊಂದಿಗೆ ಸಂಪರ್ಕ: ಹೊಲದಲ್ಲೆ ಕೂಲಿ ಕಾರ್ಮಿಕರಿಬ್ಬರು ಕ್ವಾರಂಟೈನ್

Public TV
Last updated: July 14, 2020 4:36 pm
Public TV
Share
1 Min Read
cng quarantine
SHARE

ಚಾಮರಾಜನಗರ: ಕೊರೊನಾ ಸೋಂಕಿತೆಯ ಸಂಪರ್ಕದಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಜಮೀನಿನ ಗುಡಿಸಲಿನಲ್ಲೇ ಕ್ವಾರಂಟೈನ್ ಆಗಿರುವ ಸಂಗತಿ ಚಾಮರಾಜನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಗುಂಡ್ಲುಪೇಟೆ ತಾಲೂಕಿನ ಹೊನ್ನಶೆಟ್ಟರ ಹುಂಡಿಯ ಮಹಿಳೆಯೊಬ್ಬರಿಗೆ ಮೂರು ದಿನಗಳ ಹಿಂದೆ ಕೊರೊನಾ ದೃಢಪಟ್ಟಿತ್ತು. ಇವರ ತೋಟದ ಮನೆಗೆ ಗಾರೆ ಕೆಲಸಕ್ಕೆಂದು ಗ್ರಾಮದ ಇಬ್ಬರು ಕೂಲಿ ಕಾರ್ಮಿಕರು ಹೋಗಿದ್ದರು. ಇದೇ ವೇಳೆ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ಗೊತ್ತಾಗುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತಮ್ಮ ಕುಟುಂಬದಿಂದ ದೂರವಿರಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಇಬ್ಬರು ಗಾರೆ ಕೆಲಸಗಾರರು ಹೊಲದ ಕಾವಲಿಗೆ ಹಾಕಲಾಗಿರುವ ಗುಡಿಸಲಿನಲ್ಲೇ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

vlcsnap 2020 07 14 16h23m22s55

ಇವರಿಬ್ಬರು ಗಾರೆ ಕಾರ್ಮಿಕರು ಸೋಂಕಿತ ಮಹಿಳೆಯ ನೇರ ಸಂಪರ್ಕಕ್ಕೆ ಬಂದಿಲ್ಲ. ಆದರೆ ಮಹಿಳೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಪತಿಯ ಜೊತೆ ಇವರು ಬೆರೆತಿದ್ದರು. ಈ ಹಿನ್ನೆಲೆಯಲ್ಲಿ ಆತಂಕಗೊಂಡ ಕಾರ್ಮಿಕರು ತಮ್ಮ ಶೇಂಗಾ ಹೊಲದಲ್ಲಿ ಕಾವಲು ಕಾಯಲು ಹಾಕಿರುವ ಗುಡಿಸಲಿನಲ್ಲೇ ವಾಸ್ತವ್ಯ ಹೂಡಿದ್ದಾರೆ. ಇವರ ಸಂಬಂಧಿಕರು ದೂರದಿಂದಲೇ ಇವರಿಗೆ ಆಹಾರ ಪೂರೈಕೆ ಮಾಡುತ್ತಿದ್ದಾರೆ.

ಸೋಂಕಿತ ಮಹಿಳೆಗೆ ಸೇರಿದ ಹೊಲಕ್ಕೆ ಕೃಷಿ ಕೆಲಸಕ್ಕೆಂದು ಹೋಗಿದ್ದ ಇತರ ಮೂವರು ಮಹಿಳೆಯರು ಸಹ ತಮ್ಮ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಈ ಮೂವರು ಮಹಿಳೆಯರು ಸಹ ಒಂದೇ ಮನೆಯಲ್ಲಿ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ನಮ್ಮ ಗ್ರಾಮದಲ್ಲಿ ಕ್ವಾರಂಟೈನ್‍ಗೆ ಒಳಗಾಗಿರುವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ. ಯಾವ ಅಧಿಕಾರಿಯೂ ಇತ್ತ ತಲೆ ಹಾಕಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

vlcsnap 2020 07 14 16h23m48s81

ಕ್ವಾರಂಟೈನ್‍ನಲ್ಲಿ ಇರುವವರಿಗೆ ಅವರ ಸಂಬಂಧಿಕರು ಆತಂಕದಿಂದಲೇ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ. ಸೋಂಕಿತ ಮಹಿಳೆಯ ಪತಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸಕ್ರಿಯರಾಗಿದ್ದು, ಗ್ರಾಮಸ್ಥರೊಂದಿಗೆ ಹೆಚ್ಚಿನ ಒಡನಾಟ ಹೊಂದಿದ್ದಾರೆ. ಹೀಗಾಗಿ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಗ್ರಾಮಸ್ಥರಲ್ಲಿ ಸಹಜವಾಗಿಯೇ ಆತಂಕ ಮನೆ ಮಾಡಿದೆ. ಇಬ್ಬರು ಗಾರೆ ಕೆಲಸಗಾರರು ಹಾಗೂ ಮೂವರು ಮಹಿಳಾ ಕಾರ್ಮಿಕರು ಕ್ವಾರಂಟೈನ್ ಆಗಿದ್ದರೆ, ಸೋಂಕಿತೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಕೆಯ ಪತಿ ಯಾವುದೇ ಮುಂಜಾಗ್ರತೆ ವಹಿಸಿದೆ ಊರ ತುಂಬೆಲ್ಲ ಓಡಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

TAGGED:chamarajanagarCorona VirusfieldPublic TVQuarantineworkersಕಾರ್ಮಿಕರುಕೊರೊನಾ ವೈರಸ್ಕ್ವಾರಂಟೈನ್ಚಾಮರಾಜನಗರಪಬ್ಲಿಕ್ ಟಿವಿಹೊಲ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

snehamayi krishna
Bengaluru City

20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

Public TV
By Public TV
4 minutes ago
Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
10 minutes ago
Satish Jarkiholi 1
Latest

ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ

Public TV
By Public TV
10 minutes ago
Wild elephant spotted on Chikkamagaluru highway
Chikkamagaluru

ಚಿಕ್ಕಮಗಳೂರು | ಹೈವೆಯಲ್ಲಿ ಒಂಟಿ ಸಲಗದ ಬಿಂದಾಸ್ ರೌಂಡ್ಸ್ – ವಾಹನ ಸವಾರರಿಗೆ ಅಧಿಕಾರಿಗಳ ಎಚ್ಚರಿಕೆ

Public TV
By Public TV
27 minutes ago
BJP Protest Across The Country Against Congress Half Naked Protest
Bengaluru City

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ

Public TV
By Public TV
32 minutes ago
BJP Protest
Latest

ಕಾರಿನಲ್ಲಿ ತೆರಳುತ್ತಿದ್ದ ರಾಹುಲ್‌ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?