ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿ ಬೀಸುತ್ತಿದ್ದಂತೆ, ಪ್ರಧಾನಿ ನರೇಂದ್ರ ಮೋದಿಯವರು ಸೋಂಕಿನ ಕುರಿತು ಮತ್ತು ಲಸಿಕೆ ಹಂಚಿಕೆ ಕುರಿತಾಗಿ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
Advertisement
ಕಳೆದ ಕೆಲದಿನಗಳಿಂದ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತು ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವುದನ್ನು ಮನಗಂಡು ಮೋದಿ ಅವರು ಕ್ಯಾಬಿನೆಟ್ ಸೆಕ್ರೆಟರಿ, ಆರೋಗ್ಯ ಇಲಾಖೆ ಕಾರ್ಯದರ್ಶಿ, ನೀತಿ ಆಯೋಗದ ಸದಸ್ಯರು ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಲಸಿಕೆ ವಿತರಣೆ, ಸೋಂಕು ನಿಯಂತ್ರಣ ಕ್ರಮ ಹಾಗೂ ಇತರ ವಿಷಗಳ ಕುರಿತು ಚರ್ಚೆ ನಡೆಸಿದರು.
Advertisement
Advertisement
ದೇಶದಲ್ಲಿ ಕಳೆದ ಒಂದೇ ದಿನ 93,249 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 513 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಹಾಗೂ ಕೆಲ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ ಮಹಾರಾಷ್ಟ್ರದಲ್ಲಿ ಬರೋಬ್ಬರಿ 50 ಸಾವಿರ ಪ್ರಕರಣಗಳು ವರದಿಯಾಗಿತ್ತು. ಇದೀಗ ಒಟ್ಟಾರೆ ದೇಶದಲ್ಲಿ ಒಟ್ಟು 6,91,597 ಸಕ್ರಿಯ ಪ್ರಕರಣಗಳಿವೆ ಹಾಗಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಮೋದಿ ಕೊರೊನಾ ನಿಯಂತ್ರಣ ಕುರಿತು ಸಭೆಯಲ್ಲಿ ಚರ್ಚಿಸುತ್ತಿದ್ದಾರೆ.
Advertisement
Prime Minister Narendra Modi today chaired a high-level meeting to review the COVID19 situation and vaccination program
Senior officers including Cabinet Secretary, Principal Secretary to PM, Health Secretary participated in the meeting pic.twitter.com/FhBjryducW
— ANI (@ANI) April 4, 2021
ಈ ಮೊದಲು ಆಯಾ ರಾಜ್ಯಗಳಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿಕೊಂಡು ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು. ಹಾಗೆ ದೇಶದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯಗೊಳಿಸಿದೆ.