ಕೊರೊನಾ ಸ್ಫೋಟದ ಆರಂಭದಲ್ಲೇ ಆಸ್ಪತ್ರೆಗೆ ದಾಖಲಾಗಿದ್ರು ವುಹಾನ್‍ನ ಮೂವರು ಸಂಶೋಧಕರು

Public TV
2 Min Read
china virus Wuhan corona

ವಾಷಿಂಗ್ಟನ್: ವುಹಾನ್ ಇನ್‍ಸ್ಟಿಟ್ಯೂಟ್ ಆಫ್ ವೈರಲಾಜಿ ಕೇಂದ್ರದ ಮೂವರು ಸಂಶೋಧಕರು 2019 ನವೆಂಬರ್ ತಿಂಗಳಿನಲ್ಲಿ ಆಸ್ಪತ್ರೆಗೆ  ದಾಖಲಾಗಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.

ಹೌದು. ಅಮೆರಿಕ ವಾಲ್‍ಸ್ಟ್ರೀಟ್ ಜರ್ನಲ್ ಅಮೆರಿಕದ ಗುಪ್ತಚರ ಮಾಹಿತಿಯನ್ನು ಆಧಾರಿಸಿ ಈ ವರದಿ ಮಾಡಿದ್ದು ಸಂಚಲನ ಮೂಡಿಸಿದೆ. ಡೊನಾಲ್ಡ್ ಟ್ರಂಪ್ ಆಡಳಿತ ಅವಧಿಯ ಕೊನೆಯ ದಿನಗಳಲ್ಲಿನ ಮಾಹಿತಿಯನ್ನು ಆಧಾರಿಸಿ ಈ ವರದಿಯನ್ನು ಪ್ರಕಟಿಸಿದೆ. ಅನಾರೋಗ್ಯ ಪೀಡಿತ ಸಂಶೋಧಕರ ಸಂಖ್ಯೆ, ಅವರ ಅನಾರೋಗ್ಯದ ಸಮಯ ಮತ್ತು ಅವರ ಆಸ್ಪತ್ರೆ ಭೇಟಿಗಳ ಬಗ್ಗೆ ಹೊಸ ವಿವರಗಳು ಈ ಗುಪ್ತಚರ ವರದಿಯಲ್ಲಿದೆ ಎಂದು ಹೇಳಿದೆ.

wuhan city corona

ವಿವಿಧ ಮೂಲಗಳನ್ನು ಆಧಾರಿಸಿ ಗುಪ್ತಚರ ವರದಿಗಳು ಪ್ರಕಟವಾಗುತ್ತದೆ. ಮೂವರು ಸಂಶೋಧಕರು ಅನಾರೋಗ್ಯಕ್ಕೆ ಕಾರಣವಾಗಿದ್ದು ಯಾಕೆ ಎನ್ನುವುದು ತಿಳಿದು ಬರಬೇಕಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊರೊನಾ ವೈರಸ್ ಮೂಲದ ಬಗ್ಗೆ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆ ನೇಮಿಸಿದ ತಂಡದ ಮುಂದಿನ ಸಭೆ ಕೆಲ ದಿನಗಳಲ್ಲಿ ನಡೆಯಲಿರುವ ಬೆನ್ನಲ್ಲೇ ಈ ವರದಿ ಪ್ರಕಟಗೊಂಡಿದ್ದರಿಂದ ಈಗ ಮಹತ್ವ ಪಡೆದಿದೆ.

china virus bank

2019ರ ಕೊನೆಯಲ್ಲಿ ಕೋವಿಡ್ 19 ಬಂದಿದ್ದರೂ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂಬ ಗಂಭೀರ ಆರೋಪ ಚೀನಾದ ಮೇಲಿದೆ. ಈಗ ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಈ ವರದಿ ಪ್ರಕಟಗೊಂಡಿದೆ.

ಕೊರೋನಾ ವೈರಸ್ ವೇಗವಾಗಿ ಹರಡುತ್ತಿರುವುದನ್ನು ಗಮನಿಸಿ ಈಗ ಚೀನಾವೇ ಈ ವೈರಸ್ ಸೃಷ್ಟಿ ಮಾಡಿತೇ ಎಂಬ ಬಲವಾದ ಶಂಕೆ ಕಳೆದ ವರ್ಷವೇ ಎದ್ದಿತ್ತು. ವೈರಸ್ ಅಧ್ಯಯನ ಮಾಡಲೆಂದೇ ವುಹಾನ್ ನಗರದಲ್ಲಿ ಚೀನಾ ಸರ್ಕಾರ ಸಂಶೋಧನಾ ಕೇಂದ್ರಗಳನ್ನು ತೆರೆದಿದೆ. ವುಹಾನ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ ಎಂಬ ಸಂಸ್ಥೆಯಲ್ಲಿ ಸಾರ್ಸ್ ಸೇರಿದಂತೆ ಹಲವು ವೈರಸ್ ಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಈಗ ಕೊರೋನಾ ವೈರಸ್ ಸೃಷ್ಟಿಯಾದ ಕೇಂದ್ರ ಸ್ಥಳ ವುಹಾನ್ ಆಗಿದೆ.

WHO study corona covid china wuhan main

ವುಹಾನ್ ವಿಶ್ವವಿದ್ಯಾಲಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪೀಡಿತರಾಗಿದ್ದರು. ಭಾರತದಲ್ಲಿ ಮೊದಲು ಕೇರಳದ ಮೂರು ಮಂದಿ ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಪತ್ತೆಯಾಗಿತ್ತು. ಈ ಮೂವರು ವುಹಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಆಗಿದ್ದರು ಎನ್ನುವುದು ವಿಶೇಷ.

ವೈರಾಲಜಿ ಸಂಸ್ಥೆಯಲ್ಲಿ ಏನು ಪ್ರಯೋಗ ಕೈಗೊಳ್ಳಲಾಗುತ್ತದೆ ಎನ್ನುವುದು ಈಗಲೂ ರಹಸ್ಯವಾಗಿದೆ. ಯುದ್ಧದ ಮೂಲಕ ದೇಶಗಳ ಜೊತೆ ಹೋರಾಡುವುದು ಇಂದು ಬಹಳ ಕಷ್ಟ. ಹೀಗಾಗಿ ಚೀನಾ ಜೈವಿಕ ಅಸ್ತ್ರವನ್ನು ತಯಾರು ಮಾಡುತ್ತದೆ ಎನ್ನುವ ಆರೋಪ ಈ ಹಿಂದಿನಿಂದಲೂ ಕೇಳಿ ಬಂದಿತ್ತು. ಸಾರ್ಸ್ ಆರಂಭದಲ್ಲಿ ಕಂಡು ಬಂದಿದ್ದು ಇದೇ ವುಹಾನ್ ನಲ್ಲಿ. 2002ರಲ್ಲಿ ಕಾಣಿಸಿಕೊಂಡಾಗ ಚೀನಾ ಈ ವಿಚಾರವನ್ನು ಮುಚ್ಚಿಟ್ಟಿತ್ತು. ಆದರೆ ವಿದೇಶಗಳಿಗೆ ಹರಡಿದಾಗ ಕೊನೆಗೆ ಸತ್ಯವನ್ನು ಒಪ್ಪಿಕೊಂಡಿತ್ತು. ಈಗಲೂ ಕೆಲ ವಿಜ್ಞಾನಿಗಳು ಇದು ಯಾವುದೋ ಪ್ರಾಣಿಯಿಂದ, ಪಕ್ಷಿಯಿಂದ ಕೊರೋನಾ ವೈರಸ್ ಸೃಷ್ಟಿಯಾಗಿಲ್ಲ. ಜೈವಿಕ ಅಸ್ತ್ರವನ್ನು ಪರೀಕ್ಷೆ ಮಾಡುತ್ತಿದ್ದಾಗ ಹೇಗೋ ಸೋರಿಕೆಯಾಗಿ ಈಗ ಜಗತ್ತಿಗೆ ಹರಡುತ್ತಿದೆ ಎಂದು ವಾದವನ್ನು ಮುಂದಿಡುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *