ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದೆ. ಇಂದು ಬೆಳ್ಳಂಬೆಳಗ್ಗೆ ಮಹಾಮಾರಿ ಕೊರೊನಾ ಇಬ್ಬರನ್ನು ಬಲಿ ಪಡೆಕೊಂಡಿದೆ.
49 ವರ್ಷದ ಸೋಂಕಿತ ಮತ್ತು 70 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. 49 ವರ್ಷದ ಸೋಂಕಿತ ಕೊಪ್ಪಳ ನಿವಾಸಿಯಾಗಿದ್ದು, ನಿನ್ನೆ ತಡ ರಾತ್ರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ದಾಖಲಾದ 2 ಗಂಟೆಯಲ್ಲಿ ಸೋಂಕಿತ ಸಾವಿಗೀಡಾಗಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಕಾರಟಗಿ ನಿವಾಸಿ 70 ವರ್ಷದ ವೃದ್ಧೆ ಕೂಡ ಕಳೆದ ರಾತ್ರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಪರಿಣಾಮ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿರುವುದು ಜನತೆಯನ್ನು ಆತಂಕ್ಕೀಡುಮಾಡಿದೆ.
ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೂ 639 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 399 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 228 ಸಕ್ರಿಯ ಪ್ರಕರಣಗಳಿವೆ.