ಹುಬ್ಬಳ್ಳಿ: ಕೊರೊನಾ ವೈರಸ್ ಹೊಡೆತಕ್ಕೆ ರೈತ ಸಮುದಾಯವೇ ನಲುಗಿದ್ದು, ರೈತ ತಾವು ಕಷ್ಟಪಟ್ಟು ಬೆಳೆದಿದ್ದ ಮೆಣಸಿನಕಾಯಿ ಬೆಳೆ ನಾಶಮಾಡಿದ್ದಾರೆ. ಕೊರೊನಾ ವೈರಸ್ ಎಲ್ಲೆಡೆ ಭೀತಿ ಸೃಷ್ಟಿಸಿದ್ದು, ರೈತ ಸಮುದಾಯವನ್ನು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿಸಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಣೆಯಾಗಿದೆ. ಇದರಿಂದ ಕಷ್ಟಪಟ್ಟು ಬೆಳೆದ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಲೆ ಸಿಗದಿರುವುದರಿಂದ ಬೇಸರಗೊಂಡಿರುವ ರೈತ ಬಸವರಾಜ ಸೋಲಾರಗೊಪ್ಪ, ತಮ್ಮ 2 ಎಕ್ರೆ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿ ಬೆಳೆಯನ್ನು ಸಂಪೂರ್ಣ ನಾಶಪಡಿಸಿದ್ದಾರೆ.
Advertisement
Advertisement
ಬಸವರಾಜ ಅವರು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದವರಾಗಿದ್ದು, ಕೊರೊನಾ ಎಫೆಕ್ಟ್ ನಿಂದ ಹಸಿ ಮೆಣಸಿನಕಾಯಿಗೆ ಸರಿಯಾದ ಬೆಲೆ ಸಿಗಲಿಲ್ಲ ಎಂದು ಟ್ರ್ಯಾಕ್ಟರ್ ನಿಂದ ಬೆಳೆ ನಾಶ ಮಾಡಿದ್ದಾರೆ. ಇತ್ತ ಮೆಣಸಿನಕಾಯಿ ಬೆಳೆದ ರೈತರಿಗೆ 15 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಇದುವರೆಗೂ ಆ ಹಣ ರೈತರ ಖಾತೆಗೆ ಜಮಾ ಮಾಡಿಲ್ಲ. ಒಂದು ಕಡೆ ಪರಿಹಾರ ಇಲ್ಲ, ಇನ್ನೊಂದು ಕಡೆ ಬೆಳೆದ ಬೆಳೆಗಳಿಗೆ ಬೆಲೆ ಇಲ್ಲ. ಇದರಿಂದ ನೊಂದು ರೈತ ಬೆಳೆ ನಾಶ ಮಾಡಿದ್ದಾರೆ.
Advertisement
ಸಾಲ ಮಾಡಿ ಕಷ್ಟಪಟ್ಟು ಬೆಳೆದಿದ್ದ ಬೆಳೆಗಳಿಗೆ ಬೆಲೆ ಸಿಗದೆ ರೈತರ ಬದುಕು ಸಂಕಷ್ಟದ ಸುಳಿಯಲ್ಲಿ ಸಿಲುಕಿಕೊಂಡಿದ್ದು, ಕೂಡಲೇ ಸರ್ಕಾರ ರೈತ ಸಮುದಾಯ ಕಣ್ಣೀರನ್ನು ಒರೆಸಬೇಕಿದೆ.