ಬೆಂಗಳೂರು: ಸ್ಯಾಂಡಲ್‍ವುಡ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಮಗನ ಮುಡಿ ತೆಗೆಸಿ ಹರಕೆಯನ್ನು ತೀರಿಸಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರಾದ ರಿಷಬ್ ಶೆಟ್ಟಿಯವರು ಇಂದು ಪತ್ನಿ ಪ್ರಗತಿ ಹಾಗೂ ಮಗ ರನ್ವಿತ್ ಸಮೇತ ಕೊಲ್ಲೂರಿಗೆ ಭೇಟಿ ನೀಡಿ ದೇವಿ ದರ್ಶನ ಪಡೆದುಕೊಂಡಿದ್ದಾರೆ.
ಅನ್‍ಲಾಕ್ ಆರಂಭವಾದ ಮೊದಲ ದಿನವೇ ದೇವಾಲಯಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ಅವರು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ರಿಷಬ್ ಶೆಟ್ಟಿ ಫಿಲ್ಮ್ಸ್ ಎಂಬ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಿಷಬ್ ಪಂಚೆ ಹಾಗೂ ಶಲ್ಯ ಹಾಗೂ ಅವರ ಪತ್ನಿ ನೀಲಿ ಬಣ್ಣದ ಸೀರೆಯುಟ್ಟಿದ್ದಾರೆ. ಮಗ ರನ್ವಿತ್ ಬಿಳಿ ಬಣ್ಣದ ಬಟ್ಟೆ ಧರಿಸಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ರಿಷಬ್ ಶೆಟ್ಟಿಯವರು, ತಮ್ಮ ಮಗನ ಹುಟ್ಟುಹಬ್ಬವನ್ನು ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಚಂಡಿಕಾಹೋಮ ಮಾಡಿಸುವ ಮೂಲಕ ಆಚರಿಸಿದ್ದರು.
View this post on Instagram