ಹಾವೇರಿ: ಕೊರೊನಾ ಸೋಂಕಿನಿಂದ ಪತ್ನಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪತಿ ವಿಷ ಸೇವಿಸಿ ಆತ್ಮಹತ್ಯೆಗೆಯತ್ನಿಸಿದ ಘಟನೆ ಹಾವೇರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
Advertisement
ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕು 23 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮಹಿಳೆ ಮೃತಪಟ್ಟಿದ್ದಾರೆ. ಮೃತ ಮಹಿಳೆಗೆ ಎರಡೂವರೆ ತಿಂಗಳ ಹಿಂದೆ ಹೆರಿಗೆಯಾಗಿತ್ತು. ಹೆರಿಗೆ ನಂತರದ ಕೆಲವು ದಿನಗಳಲ್ಲಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ತಿಂಗಳ ಹಿಂದೆ ಹೆರಿಗೆ ನಂತರ ಕೆಲವು ದಿನಗಳಲ್ಲಿ ಮಗು ಮೃತಪಟ್ಟಿತ್ತು. ಮಗು ಮತ್ತು ಪತ್ನಿಯನ್ನ ಕಳೆದುಕೊಂಡ ಪತಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದೆ.
Advertisement
ಅಸ್ವಸ್ಥ ಪತಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಸದ್ಯ ಆರೋಗ್ಯ ಸ್ಥಿರವಾಗಿದೆ. ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದನ್ನ ಜಿಲ್ಲಾ ಡಾ.ರಾಘವೇಂದ್ರಸ್ವಾಮಿ ಎಚ್.ಎಸ್ ದೃಡಪಡಿಸಿದ್ದಾರೆ. ಅಲ್ಲದೆ ಕೊವೀಡ್ ನಿಯಮಾನುಸಾರ ಮಹಿಳೆಯ ಅಂತ್ಯಕ್ರಿಯೆ ನೆರೆವೇರಿಸಲಾಗಿದೆ.