ಸಿಡ್ನಿ: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದುಕೊಂಡಿದೆ. ಈ ನಡುವೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ನಡುವೆ ಇರುವಂತಹ ನಾಯಕತ್ವದ ವಿಭಿನ್ನತೆಯನ್ನು ನೋಡಲು ಕಾತುರನಾಗಿದ್ದೇನೆ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ವೇಗಿ ಬ್ರೆಟ್ ಲೀ ತಿಳಿಸಿದ್ದಾರೆ.
- Advertisement 2
ಸ್ಥಳೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಭಾಗವಹಿಸಿ ಮಾತನಾಡಿದ ಬ್ರೆಟ್ ಲೀ, ಮುಂದೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಎರಡು ತಂಡದ ನಾಯಕರ ನಾಯಕತ್ವ ಮತ್ತು ಆಟ ವಿಭಿನ್ನವಾಗಿದೆ ವಿಲಿಯಮ್ಸನ್ ಶಾಂತಚಿತ್ತದ ನಾಯಕನಾದರೆ, ಕೊಹ್ಲಿ ಆಕ್ರಮಣಕಾರಿ ನಾಯಕತ್ವವನ್ನು ತೋರುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ:ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಭಾರತ ತಂಡ ಪ್ರಕಟ -ಮೂವರು ಕನ್ನಡಿಗರಿಗೆ ಸ್ಥಾನ
- Advertisement 3
- Advertisement 4
ವಿರಾಟ್ ನಾಯಕತ್ವ ಮತ್ತು ಬ್ಯಾಟಿಂಗ್ ಎರಡರಲ್ಲೂ ಆಕ್ರಮಣಕಾರಿಯಾಗಿ ಕಾಣಿಸಿಕೊಂಡರೆ, ವಿಲಿಯಮ್ಸನ್ ಶಾಂತಚಿತ್ತರಾಗಿ ನಾಯಕತ್ವ ನಿಭಾಯಿಸುತ್ತಾರೆ ಇದರೊಂದಿಗೆ ಅವರು ಸಮಯಕ್ಕೆ ಸರಿಯಾಗಿ ಬ್ಯಾಟಿಂಗ್ನಲ್ಲಿ ಆಕ್ರಮಣಕಾರಿ ಆಟಕ್ಕೆ ಮೊರೆ ಹೋಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ರೆಟ್ರೋ ಶೈಲಿಯ ಜೆರ್ಸಿಯಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು
ಈ ಇಬ್ಬರೂ ಆಟಗಾರರ ಆಟ ಮತ್ತು ನಾಯಕತ್ವ ಗುಣ ಬೇರೆ ಬೇರೆಯಾಗಿದ್ದು, ವಿಲಿಯಮ್ಸನ್ ಬೋರ್ ಆಗದ ರೀತಿಯಲ್ಲಿ ಸಾಂಪ್ರಾದಾಯಿಕ ನಾಯಕತ್ವನ್ನು ನಿಭಾಯಿಸುತ್ತಿದ್ದಾರೆ ಮತ್ತು ಅವರ ಕ್ರಿಕೆಟ್ ಜ್ಞಾನ ಮೆಚ್ಚುವಂತದ್ದಾಗಿದೆ. ಕೊಹ್ಲಿ ಕೂಡ ಕ್ರಿಕೆಟ್ನಲ್ಲಿ ಸಾಕಷ್ಟು ಅನುಭವ ಹೊಂದಿದ್ದು ಇದೀಗ ಈ ಇಬ್ಬರು ವಿಭಿನ್ನ ನಾಯಕರ ಕಾದಾಟ ನೋಡಲು ಕಾತುರನಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ವಿಶ್ವಕಪ್ಗಾಗಿ ಐಸಿಸಿ ಮಹತ್ವದ ನಿರ್ಧಾರ – ಬದಲಾವಣೆಯ ಪರ್ವ ಆರಂಭ
ಭಾರತ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವೆ ಟೆಸ್ಟ್ ಚಾಂಪಿಯನ್ಶಿಪ್ ಜೂನ್ 18ರಿಂದ ಸೌಥಾಂಪ್ಟನ್ನಲ್ಲಿ ನಡೆಯಲಿದ್ದು, ಈಗಾಗಲೇ ಭಾರತ ತಂಡ ಇಂಗ್ಲೆಂಡ್ನಲ್ಲಿ ಕ್ವಾರಂಟೈನ್ಗೆ ಒಳಗಾಗಿದೆ.