– ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ
– 60 ಲಕ್ಷ ಮನೆಯನ್ನು 6 ಕೋಟಿ ಮನೆಯೆಂದು ವೈರಲ್
ಉಡುಪಿ: ರಾಜ್ಯದಲ್ಲಿ ಒಂದು ಕಡೆಯಿಂದ ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿದ್ದಂತೆ, ಜನಪ್ರತಿನಿಧಿಗಳ ವಿರುದ್ಧ ಷಡ್ಯಂತ್ರ ಶುರುವಾಗಿದೆ. ಸಿಂಪಲ್ ಶ್ರೀನಿವಾಸ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಶುರುವಾಗಿದೆ.
Advertisement
ಮಾಜಿ ಮುಜರಾಯಿ, ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹುಟ್ಟೂರಿನಲ್ಲಿ 6 ಕೋಟಿ ರೂಪಾಯಿ ಮನೆ ಕಟ್ಟಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೋ ಮತ್ತು ಬರಹವನ್ನು ಹರಿಯಬಿಡಲಾಗಿದೆ. ಇದು ಉಡುಪಿ ಜಿಲ್ಲೆಯಾದ್ಯಂತ ಓಡಾಡಿ ಇದೀಗ ಭರೀ ಚರ್ಚೆಗೆ ಗ್ರಾಸವಾಗಿದೆ.
Advertisement
Advertisement
ತಮ್ಮ ವಿರುದ್ಧ ಅಪಪ್ರಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಲೋಕಾಯುಕ್ತಕ್ಕೆ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಸುಮಾರು 60 ಲಕ್ಷ ಮೌಲ್ಯದ ಮನೆ ಇದು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಶ್ರೀನಿವಾಸ್ ಪೂಜಾರಿ ಲೋಕಾಯುಕ್ತರಿಗೆ ಪತ್ರ ಮೂಲಕ ವಿನಂತಿ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಕೋಟದಲ್ಲಿ ಶ್ರೀನಿವಾಸ ಪೂಜಾರಿ ಅವರಿಗೆ ಮಂತ್ರಿಸ್ಥಾನ ಸಿಗುತ್ತದೆ ಎಂದು ರಾಜಕೀಯ ವಿಶ್ಲೇಷಣೆಗಳು ನಡೆಯುತ್ತಿದೆ. ಶ್ರೀನಿವಾಸ ಪೂಜಾರಿ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಕುತಂತ್ರ ಮಾಡುವ ಬೆಳವಣಿಗೆಗಳು ಶುರುವಾಗಿದೆ. ಇದನ್ನೂ ಓದಿ: Exclusive: ಉಸಿರಿರೋತನಕ ಕೇಳಿ ಸಚಿವ ಸ್ಥಾನ ಪಡೆಯಲ್ಲ- ಕುಂದಾಪುರದ ವಾಜಪೇಯಿ ಹಾಲಾಡಿ ನೇರ ನುಡಿ
Advertisement
ಲೋಕಾಯುಕ್ತರಿಗೆ ನನ್ನ ಎಲ್ಲಾ ಆಸ್ತಿಪಾಸ್ತಿಯ ವಿವರಗಳನ್ನು ನೀಡಿದ್ದೇನೆ. ಅವರೇ ಈ ಬಗ್ಗೆ ಸಂಪೂರ್ಣ ತನಿಖೆಯನ್ನು ಮಾಡಲಿ. ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಆಗುತ್ತಿದೆ. ಕಳೆದ ಮೂರು ವರ್ಷಗಳಿಂದ ಹಂತಹಂತವಾಗಿ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಒಟ್ಟು ಅಂಕಿ-ಅಂಶದ ಪ್ರಕಾರ ಒಂದು ರೂಪಾಯಿ ಕೂಡ ನನ್ನ ಆದಾಯಕ್ಕಿಂತ ಹೆಚ್ಚು ಖರ್ಚು ಆಗಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.