ತಿರುವನಂತಪುರಂ: ಕೇರಳದ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ದುರಂತ ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿದ್ದು, 15 ಮಂದಿಯ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ 123 ಮಂದಿ ಗಾಯಗೊಂಡಿದ್ದಾರೆ ಎಂದು ಮಲಪ್ಪುರಂ ಎಸ್‍ಪಿ ತಿಳಿಸಿದ್ದಾರೆ.
#WATCH Kerala: Dubai-Kozhikode Air India flight (IX-1344) with 190 people onboard, skidded during landing at Karipur Airport today. (Video source: Karipur Airport official) pic.twitter.com/6zrcr7Jugg
— ANI (@ANI) August 7, 2020
Advertisement
ಇಂದು ಸಂಜೆ 7.45ರ ಸುಮಾರಿಗೆ ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೋಯಿಕ್ಕೋಡ್‍ನ ಕರಿಪುರದಲ್ಲಿ ಲ್ಯಾಂಡಿಗೆ ವೇಳೆ ನಿಲ್ದಾಣದ ರನ್ ವೇಯಲ್ಲಿ ಜಾರಿ ದುರಂತಕ್ಕೀಡಾಗಿದೆ. ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡಿಲ್ಲ. ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು. 10 ಮಂದಿ ಮಕ್ಕಳು, ಇಬ್ಬರು ಪೈಲಟ್‍ಗಳು ಹಾಗೂ ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು. ಸದ್ಯ ಪ್ರಯಾಣಿಕರ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.
Advertisement
14 dead, 123 injured and 15 seriously injured in Kozhikode plane crash incident at Karipur Airport: Malappuram SP to ANI. #Kerala pic.twitter.com/QfFZxHDkVx
— ANI (@ANI) August 7, 2020
Advertisement
ಭೀಕರ ದುರಂತದಲ್ಲಿ ಪುಟ್ಟ ಕಂದಮ್ಮವೊಂದು ಬದುಕುಳಿದಿದೆ. ವಿಮಾನ ಭೀಕರ ದುರಂತಕ್ಕೀಡಾದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿಗೆ ಪುಟ್ಟ ಮಗುವೊಂದು ಅಳುತ್ತಿರುವ ಶಬ್ದ ಕೇಳಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಮಗುವಿನ ಅಳು ಕೇಳುತ್ತಿರುವ ಕಡೆ ತೆರಳಿ ರಕ್ಷಿಸಿದ್ದಾರೆ. ಘಟನೆಯಿಂದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೊಂಡ್ರೊಟ್ಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ.
Advertisement
#UPDATE Death toll in the Air India Express flight crash landing incident at Kozhikode rises to 16: Directorate General of Civil Aviation (DGCA) https://t.co/L6rHLnswJj
— ANI (@ANI) August 7, 2020