– ಲಿಂಬಾವಳಿಗೆ ನಡ್ಡಾ ಪ್ರಶ್ನೆಗಳ ಮೇಲೆ ಪ್ರಶ್ನೆ
ನವದೆಹಲಿ: ಮಾಜಿ ಸಚಿವರೊಬ್ಬರ ರಾಸಲೀಲೆ ಸಿಡಿ ಹೊರ ಬರುತ್ತಿದ್ದಂತೆಯೇ ಆರು ಮಂದಿ ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಬೆನ್ನಲ್ಲೇ ಕೆಲಸದ ನಿಮಿತ್ತ ದೆಹಲಿಗೆ ಆಗಮಿಸಿರುವ ಸಚಿವ ಅರವಿಂದ ಲಿಂಬಾವಳಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಾಹಿತಿ ಸಂಗ್ರಹಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
Advertisement
ಹೌದು. 6 ಮಂದಿ ಸಚಿವರು ಕೋರ್ಟ್ ಮೆಟ್ಟಿರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ್ದ ಅರವಿಂದ ಲಿಂಬಾವಳಿ ಬಳಿಯಿಂದ ಜೆ.ಪಿ. ನಡ್ಡಾ ಇಂಚಿಂಚೂ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
Advertisement
Advertisement
ಪಶ್ಚಿಮ ಬಂಗಾಳ ಚುನಾವಣೆಯ ಹಿನ್ನೆಲೆಯಲ್ಲಿ ಅರವಿಂದ ಲಿಂಬಾವಳಿ ದೆಹಲಿಗೆ ಆಗಮಿಸಿದ್ದಾರೆ. ಹೀಗೆ ಭೇಟಿ ವೇಳೆ ಜೆ.ಪಿ ನಡ್ಡಾ ಭೇಟಿ ಮಾಡಿ ಸಿಡಿ ಬಗ್ಗೆ ಚರ್ಚೆ ಮಾಡಿದ್ದಾರೆ. ಕೋರ್ಟ್ ಮೆಟ್ಟಿಲೇರಿ ತಾವೇ ತಪ್ಪಿತಸ್ಥರು ಎಂದು ಒಪ್ಪಿಕೊಂಡಂತಲ್ಲವೇ ಎಂದು ಲಿಂಬಾವಳಿಯನ್ನು ನಡ್ಡಾ ಪ್ರಶ್ನಿಸಿದ್ದಾರೆ. ಅಲ್ಲದೆ ಕೋರ್ಟಿಗೆ ಹೋಗುವ ಮುನ್ನ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿದ್ದರಾ…? ಮುಂದಿನ ನಡೆಗಳು ಏನು ಅನ್ನೊ ಬಗ್ಗೆ ಲಿಂಬಾವಳಿ ಬಳೀ ನಡ್ಡಾ ಸಮಾಲೋಚನೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
Advertisement
ಕೋರ್ಟ್ ಮೊರೆ ಹೋಗಿರುವ ಸಚಿವರು:
ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡಬಾರದು ಎಂದು 6 ಮಂದಿ ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ. ಆರು ಸಚಿವರಿಗೆ ಭೀತಿ ಹುಟ್ಟಿರುವುದು ಏಕೆ? ಇದ್ದಕ್ಕಿಂದ್ದಂತೆ ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.