ಕೋಲಾರ: ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಇದನ್ನ ಮತ್ತಷ್ಟು ಕಡಿಮೆ ಮಾಡಲು ಕೋಲಾರದಲ್ಲಿ ಶನಿವಾರ, ಭಾನುವಾರ ವೀಕೆಂಡ್ ಲಾಕ್‍ಡೌನ್ ಅನ್ನು ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ವೀಕೆಂಡ್ ಲಾಕ್ ಡೌನ್ ಘೋಷಣೆ ಮಾಡಿದರು. ಇದನ್ನೂ ಓದಿ: ಹೆಸರಿಟ್ಟು ಮುದ್ದು ಮಗನನ್ನು ಪರಿಚಯಿಸಿದ ಗಾಯಕಿ ಶ್ರೇಯಾ ಘೋಷಾಲ್
ಕೋಲಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ 600 ಕೆ.ಎಲ್ ಆಕ್ಸಿಜನ್ ಪ್ಲಾಂಟ್ ಉದ್ಟಾಟನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೊರೊನಾ ಸೋಂಕಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಶನಿವಾರ 10 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್‍ಡೌನ್ ಇರಲಿದೆ. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಸಹಕಾರ ಹಾಗೂ ಅಧಿಕಾರಿಗಳ ಪರಿಶ್ರಮದಿಂದ ಕೋಲಾರ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ ನಟಿ ಪ್ರೇಮಾ
ಜಿಲ್ಲೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಗಳು ರದ್ದಾದ ಹಿನ್ನೆಲೆ ಹಿನ್ನೆಲೆ ರಾಜ್ಯದಲ್ಲಿ ಪರೀಕ್ಷೆ ಬೇಕಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಶಿಕ್ಷಣ ಸಚಿವರ ಜೊತೆ ಚರ್ಚಿಸಿ ಅಭಿಪ್ರಾಯ ತಿಳಿಸುತ್ತೇನೆ ಎಂದರು. ಇದೇ ವೇಳೆ ಸಂಸದ ಎಸ್.ಮುನಿಸ್ವಾಮಿ ಎಮ್ಮೆಲ್ಸಿ ವೈ.ಎ.ನಾರಾಯಣಸ್ವಾಮಿ, ಡಿಸಿ ಸೆಲ್ವಮಣಿ, ಎಸ್ಪಿ ಕಾರ್ತಿಕ್ ರೆಡ್ಡಿ ಉಪಸ್ಥಿತರಿದ್ದರು.