ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಮಾರಕ ಬ್ಲ್ಯಾಕ್ ಫಂಗಸ್ ಕಾಟ ಹೆಚ್ಚಾಗುತ್ತಿದೆ. ದಿನೇ ದಿನೇ ಹೆಚ್ಚಾಗುತ್ತಿರುವ ಡೇಂಜರ್ ಬ್ಲ್ಯಾಕ್ ಫಂಗಸ್‍ಗೆ ಜಿಲ್ಲೆಯ ಜನ ಆತಂಕಕ್ಕೆ ಒಳಗಾಗಿದ್ದಾರೆ.
ಈ ವರೆಗೆ 90 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಇದರಲ್ಲಿ 43 ಜನ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 3 ಜನರು ಸಾವನ್ನಪ್ಪಿದ್ದಾರೆ. ಸಾಕಷ್ಟು ಜನ ವೈದ್ಯರ ಸಲಹೆ ನಿರಾಕರಿಸಿ, ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದು, 47 ಜನರಿಗೆ ಸರ್ಜರಿ ಮಾಡಲಾಗಿದೆ.
ಎಲ್ಲ ರೋಗಿಗಳಿಗೂ ಕೋಲಾರ ಹೊರ ವಲಯದಲ್ಲಿರುವ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಾಗಿನಿಂದ ಈ ವರೆಗೆ 3,923 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜೂನ್ ನಿಂದ ಇಲ್ಲಿಯವರೆಗೆ 245 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ.ಚಾರಣಿ ಸ್ಪಷ್ಟನೆ ನೀಡಿದ್ದಾರೆ.