ಬೆಂಗಳೂರು: ಕೋವಿಡ್ 19 ನಿಯಂತ್ರಣ ಸಂಬಂಧ ಜಾಗತಿಕ ಸಾಫ್ಟ್‌ವೇರ್ ಕಂಪನಿ ಮೈಕ್ರೋಸಾಫ್ಟ್ ಕರ್ನಾಟಕಕ್ಕೆ 3 ಆರ್‌ಟಿ ಪಿಸಿಆರ್ ಪರೀಕ್ಷಾ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮೈಕ್ರೋಸಾಫ್ಟ್ ಕಂಪನಿಯ ಕಾರ್ಪೊರೇಟ್ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಕುಮಾರ್ ಭೇಟಿಯಾಗಿ ಯಂತ್ರವನ್ನು ಕೊಡುಗೆಯಾಗಿ ನೀಡಿದರು.
Advertisement
Advertisement
ಈ ವೇಳೆ ಮಾತನಾಡಿದ ಸಿಎಂ, ಖಾಸಗಿ ಕಂಪನಿಗಳು ಕೋವಿಡ್ 19 ರ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿರುವುದು ಸ್ವಾಗತಾರ್ಹ. ಕೊರೊನಾ ವೈರಸ್ ನಿಯಂತ್ರಿಸಲು ಸಾರ್ವಜನಿಕರು ಸೇರಿದಂತೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಧ್ಯರಾತ್ರಿ ನಟಿ ಸುಧಾರಾಣಿಯನ್ನು ಕಾಯಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ: ಸಚಿವ ಸುಧಾಕರ್
Advertisement
ಈ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಉಪಸ್ಥಿತರಿದ್ದರು.