– 40 ವರ್ಷಗಳಲ್ಲಿ ಅತ್ಯಂತ ದೊಡ್ಡ ಕುಸಿತ
ನವದೆಹಲಿ: ಕೋವಿಡ್ 19 ನಿಯಂತ್ರಣ ಸಂಬಂಧ ಘೋಷಿಸಲಾದ ಲಾಕ್‌ಡೌನ್‌ನಿಂದಾಗಿ ಮೊದಲ ಏಪ್ರಿಲ್ ನಿಂದ ಜೂನ್ ವರೆಗಿನ ಮೊದಲ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ ದರ (ಜಿಡಿಪಿ) ಬೆಳವಣಿಗೆ ದರ ಶೇ. 23.9 ಕ್ಕೆ ಕುಸಿದಿದೆ.
ಇದು ಕಳೆದ 40 ವರ್ಷಗಳಲ್ಲೇ ಅತ್ಯಂತ ದೊಡ್ಡ ಕುಸಿತವಾಗಿದೆ. ಇದರಿಂದ ಹಣದುಬ್ಬರ ಮತ್ತಷ್ಟು ಹೆಚ್ಚುವ ಆತಂಕವನ್ನು ಆರ್ಥಿಕ ತಜ್ಞರು ಹೊರಹಾಕಿದ್ದಾರೆ. 2019-20ರ ಮೊದಲ ತ್ರೈಮಾಸಿಕದಲ್ಲಿ ಶೇ 5.2ರಷ್ಟು ಬೆಳವಣಿಗೆ ದಾಖಲಿಸಲಾಗಿತ್ತು.
Advertisement
Advertisement
ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ) ದಾಖಲೆಗಳನ್ನು ಬಿಡುಗಡೆ ಮಾಡಿದ್ದು, 2020-21ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ 26.90 ಲಕ್ಷ ಕೋಟಿ ರೂ. ಆಗಿದೆ. 2019-20ರ ಮೊದಲ ತ್ರೈಮಾಸಿಕದಲ್ಲಿನ 35.35 ಲಕ್ಷ ಕೋಟಿ ರೂ.ಗೆ ಹೋಲಿಸಿದರೆ ಶೇ. 23.9ರಷ್ಟು ಕುಸಿತವಾಗಿದೆ ಎಂದು ತಿಳಿಸಿದೆ.
Advertisement
ಲಾಕ್‍ಡೌನ್ ಕಾರಣದಿಂದ ಉತ್ಪಾದನೆ ಸಂಪೂರ್ಣ ನಿಂತು ಹೋಗಿ, ಮೊದಲ ತ್ರೈಮಾಸಿಕದಲ್ಲಿ ಕೇಂದ್ರದ ಬೊಕ್ಕಸಕ್ಕೆ ಬರೋಬ್ಬರಿ 13 ಲಕ್ಷ ಕೋಟಿ ನಷ್ಟ ಆಗಿದೆ. ಉತ್ಪಾದನೆ ಮತ್ತು ನಿರ್ಮಾಣವಲಯದಲ್ಲಿ ಅನುಕ್ರಮವಾಗಿ ಶೇ. 39.3 ಮತ್ತು ಶೇ. 50.3 ರಷ್ಟು ಕುಸಿದಿದೆ.
Advertisement
ಉಳಿದ ಕ್ಷೇತ್ರಗಳಿಗೆ ಹಿನ್ನಡೆಯಾಗಿದ್ದರೆ ಕೃಷಿ ಕ್ಷೇತ್ರದಲ್ಲಿ ಬೆಳವಣಿಗೆಯಾಗಿದೆ. ಈ ಅವಧಿಯಲ್ಲಿ ಶೇ.3.4ರಷ್ಟು ಪ್ರಗತಿಯಾಗಿದ್ದರೆ 2019-20ರ ಮೊದಲ ತ್ರೈಮಾಸಿಕದಲ್ಲಿ ಶೇ.3 ರಷ್ಟು ಬೆಳವಣಿಗೆ ಸಾಧಿಸಿತ್ತು.