ಬೆಂಗಳೂರು: ಚುನಾವಣೆ ಕರ್ತವ್ಯದಲ್ಲಿ ಕೋವಿಡ್‍ಗೆ ಮೃತರಾದ ಮತ್ತು ವಿದ್ಯಾಗಮದಲ್ಲಿ ಪಾಠ ಮಾಡಿ ಕೋವಿಡ್‍ನಿಂದ ಮರಣಹೊಂದಿದ ಶಿಕ್ಷಕರಿಗೆ 50 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಟ್ವಿಟ್ಟರ್ ಮೂಲಕ ಸರ್ಕಾರಕ್ಕೆ ಆಗ್ರಹ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಚುನಾವಣೆ ಕರ್ತವ್ಯದಲ್ಲಿ ಮತ್ತು ವಿದ್ಯಾಗಮ ಯೋಜನೆಯಲ್ಲಿ ಪಾಠ ಮಾಡಿ ಈಗಾಗಲೇ 145ಕ್ಕೂ ಹೆಚ್ಚು ಶಿಕ್ಷಕರು ಕೊರೊನಾಗೆ ಬಲಿಯಾಗಿದ್ದಾರೆ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿಮಾಡಿಕೊಂಡಿದ್ದಾರೆ.
ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ.
1/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 24, 2021
ಶಿಕ್ಷಕರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಅವರ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಕೂಡಲೇ ಈ ಕುರಿತು ತುರ್ತುಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.