ಕೋವಿಡ್ ಕಂಟ್ರೋಲ್‍ನಲ್ಲಿದೆ, ಸದ್ಯಕ್ಕೆ ಲಾಕ್ ಡೌನ್ ಹೇರಲ್ಲ: ಸೋಮಶೇಖರ್

Public TV
1 Min Read
somshekar

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಭೀತಿ ಶುರುವಾಗಿದೆ. ಆದ್ರೆ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಕಂಟ್ರೋಲ್‍ನಲ್ಲಿದೆ, ಸದ್ಯಕ್ಕೆ ಲಾಕ್ ಡೌನ್ ಹೇರಲ್ಲ ಎಂದು ಸಚಿವ ಸೋಮಶೇಖರ್ ಹೇಳಿದ್ದಾರೆ.

somshekar 2

ಚಾಮರಾಜನಗರಕ್ಕೆ ಮೊದಲ ಬಾರಿ ಭೇಟಿ ಕೊಟ್ಟು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕಂಟ್ರೋಲ್‍ನಲ್ಲಿದೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ಹೇರುವುದಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಮೂರನೇ ಅಲೆ ಬರುತ್ತೆ ಅಂತಾ ಹೇಳುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಕೋವಿಡ್, ಪ್ರವಾಹ ನಿಯಂತ್ರಣ ನಿರ್ವಹಣೆ ಬಗ್ಗೆ ಉಸ್ತುವಾರಿಗೆ ಸಿಎಂ ಜವಾಬ್ದಾರಿ ನೀಡಿದ್ದಾರೆ. ಕೋವಿಡ್ ನಿಯಂತ್ರಣ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಬಗ್ಗೆ ಮೂರು, ನಾಲ್ಕು ದಿನದಲ್ಲಿ ಸಿಎಂಗೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

BOMMAI 3

ಸಂಸದ ಶ್ರೀನಿವಾಸ್ ಪ್ರಸಾದ್ ಚುನಾವಣೆ ರಾಜಕೀಯಕ್ಕೆ ಗುಡ್ ಬೈ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಸಾದ್ ಹಿರಿಯ ರಾಜಕಾರಣಿ. ಐವತ್ತು ವರ್ಷಗಳ ರಾಜಕೀಯದಲ್ಲಿ ಏಳು, ಬೀಳು ಕಂಡಿದ್ದಾರೆ. ಅವರು ಕಂದಾಯ ಸಚಿವರಾಗಿದ್ದಾಗ ಬೆಂಗಳೂರಿನಲ್ಲಿ 18 ಕಿಲೋ ಮೀಟರ್ ವ್ಯಾಪ್ತಿಯ ರಸ್ತೆ ಕ್ರಮಬದ್ಧ ಮಾಡುವ ಐತಿಹಾಸಿಕ ಕ್ರಮ ಕೈಗೊಂಡಿದ್ದರು. ಆರೋಗ್ಯ, ವಯಸ್ಸಿನ ದೃಷ್ಟಿಯಿಂದ ತಮ್ಮ ಅವಧಿ ಮುಗಿದ ನಂತರ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿಯಾಗಲಿದ್ದಾರೆ ಎಮದರು.

SRINIVAS PRASAD

ಇದೇ ವೇಳೆ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣವರ್ ಬಿಜೆಪಿ ಸೇರ್ಪಡೆಯಾಗುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾರು ಬೇಕಾದರೂ ಬಿಜೆಪಿಗೆ ಬರಬಹುದು. ಬಿಜೆಪಿ ತತ್ವ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತವಿದೆ. ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ವಿಚಾರವಾಗಿ ಈಗಾಗಲೇ ನಮ್ಮ ಸಿಎಂ ಖಡಕ್ ಉತ್ತರ ನೀಡಿದ್ದಾರೆ. ರಾಜಕೀಯ ಮೈಲೇಜ್ ತೆಗೆದುಕೊಳ್ಳಲು ಅಣ್ಣಾಮಲೈ ಸತ್ಯಾಗ್ರಹ ಮಾಡಿದ್ದಾರೆ ಎಂದು ಹೇಳಿದ್ದಾರೆ.  ಇದನ್ನೂ ಓದಿ:ರಾಜ್ಯದ 8 ಜಿಲ್ಲೆಗಳಲ್ಲಿ ಇಂದಿನಿಂದಲೇ ವೀಕೆಂಡ್ ಕರ್ಫ್ಯೂ ಜಾರಿ

Share This Article
Leave a Comment

Leave a Reply

Your email address will not be published. Required fields are marked *