ದಾವಣಗೆರೆ: ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯರವರು ಮೂರು ದಿನಗಳ ಕಾಲ ವಾಸ್ತವ್ಯ ಹೂಡಿದ್ದಾರೆ.
Advertisement
ಇಂದಿನಿಂದ ಮೂರು ದಿನಗಳ ಕಾಲ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ವಾಸ್ತವ್ಯ ಮಾಡಲಿದ್ದೇನೆ. ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ನಿಮ್ಮೊಂದಿಗೆ ನಾನಿದ್ದೇನೆಂದು ಮನೋಬಲ ತುಂಬಲು ಕೋವಿಡ್ ಕೇರ್ ಸೆಂಟರ್ನಲ್ಲಿ ವಾಸ್ತವ್ಯ ಮಾಡುತ್ತಿದ್ದೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Advertisement
Advertisement
ಸಂಜೆ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್ ಸೋಂಕಿತರಿಗೆ ಧರ್ಯ ತುಂಬಲು ಆಯೋಜಿಸಿದ್ದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕಿ ಮನರಂಜೆನೆಯನ್ನು ನೀಡಿದ್ದಾರೆ.
Advertisement
ನಿಮ್ಮ ಅದ್ಭುತವಾದ ಕೆಲಸಗಳಿಗೆ ಕೋಟಿ ಕೋಟಿ ನಮನಗಳು. ದಯವಿಟ್ಟು ನಿಮ್ಮ ಆರೋಗ್ಯ ದ ಬಗ್ಗೆ ಕಾಳಜಿ ವಹಿಸಿ. ನಿಮ್ಮಂತಹ ರಾಜಕೀಯ ವ್ಯಕ್ತಿಗಳು ಇರುವುದರಿಂದ ಹಾಗೂ ನಿಮ್ಮ ಜನಸೇವೆ ಸಮಾಜಸೇವೆ ಇನ್ನೊಬ್ಬರಿಗೆ ಮಾದರಿಯಾಗಬೇಕು. ನಿಮ್ಮ ಕಾರ್ಯವೈಖರಿಯ ಬಗ್ಗೆ ಹಾಗೂ ನಿಮ್ಮ ಮಾದರಿಯನ್ನು ಬೇರೆಯ ರಾಜಕೀಯ ವ್ಯಕ್ತಿಗಳು ಅನುಸರಿಸಿದರೆ ನಮ್ಮ ಕರ್ನಾಟಕ ರಾಜ್ಯ ಹಾಗೂ ದೇಶ ರಾಮರಾಜ್ಯ ಆಗುವುದರಲ್ಲಿ ಸಂಶಯವಿಲ್ಲ. ಕೋವಿಡ್ ಕೇರ್ ಸೆಂಟರ್ನಲ್ಲಿ ವಾಸ್ತವ್ಯ ಮಾಡಿದ ವಿಶ್ವದ ಮೊದಲ ಜನ ಪ್ರತಿನಿಧಿಗಳು ಎಂದು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್‍ಗಳು ಬಂದಿವೆ. ಇದನ್ನೂ ಓದಿ: ಕೋವಿಡ್ ಕೇಂದ್ರದಲ್ಲಿ ಯೋಗ ಟೀಚರ್ ಆದ ರೇಣುಕಾಚಾರ್ಯ
ಕೆಲವು ದಿನಗಳ ಹಿಂದೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಎಚ್ ಕಡದಕಟ್ಟೆ ಗ್ರಾಮದಲ್ಲಿರುವ ಕೋವಿಡ್ ಕೇರ್ ಸೆಂಟರ್‍ನಲ್ಲಿರುವ ಸೋಂಕಿತರಿಗೆ ರೇಣುಕಾಚಾರ್ಯ ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟಿದ್ದರು. ಇದನ್ನೂ ಓದಿ: ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ – ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಹಲವು ದಿನಗಳಿಂದ ಸೋಂಕಿತರ ಜೊತೆ ಸೇರಿ ರೇಣುಕಾಚಾರ್ಯ ಒಂದಲ್ಲ ಒಂದು ಕೆಲಸದಲ್ಲಿ ನಿರತರಾಗಿದ್ದಾರೆ. ಮೃತ ಸೋಂಕಿತನ ಶವ ಹೊತ್ತು ಅಂಬುಲೆನ್ಸ್ ಚಾಲನೆ ಮಾಡುತ್ತ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗುವ ಮೂಲಕ ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಇದೀಗ ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತರಿಗೆ ಶಾಸಕ ಎಂಪಿ ರೇಣುಕಾಚಾರ್ಯ ಯೋಗ ಹೇಳಿಕೊಟ್ಟು ಆತ್ಮಸ್ಥೈರ್ಯ ತುಂಬಿದ್ದಾರೆ.