ಬೆಂಗಳೂರು: ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆರೋಗ್ಯ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಯಲಹಂಕ ವಲಯದ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡದೆ ಟೆಸ್ಟಿಂಗ್ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದರು. ಅಲ್ಲದೆ ಹೆಚ್ಚು ಟೆಸ್ಟ್ ಮಾಡಿದಂತೆ ಲೆಕ್ಕ ನೀಡುತ್ತಿದ್ದರು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.
Advertisement
Advertisement
ದೃಶ್ಯಾವಳಿ ಗಮನಿಸಿದ ಆಧಾರದ ಮೇಲೆ ಇಬ್ಬರು ಸ್ವಾಬ್ ಕಲೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳನ್ನು ನಿರೀಕ್ಷಣಾ ವಿಚಾರಣೆ ಬಳಿಕ ಕಡ್ಡಾಯವಾಗಿ ಅಮಾನತುಗೊಳಿಸುವಂತೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಆದೇಶ ಹೊರಡಿಸಿದ್ದಾರೆ.
Advertisement
ನಗರದ ಆಡುಗೋಡಿ ಔಷಧಾಲಯಕ್ಕೆ ಮುಖ್ಯ ಆಯುಕ್ತರು ಇಂದು ಬೆಳಗ್ಗೆ ಭೇಟಿ ನೀಡಿ ಕೋವಿಡ್ ಪರೀಕ್ಷೆ ಹಾಗೂ ಲಸಿಕೆ ನೀಡುವ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಿದು. ಈ ವೇಳೆ ಲಸಿಕೆ ಪಡೆಯಲು ಬಂದ ನಾಗರಿಕರ ಜೊತೆ ಮಾತನಾಡಿ, ಲಸಿಕೆ ನೀಡುವ ಬಗ್ಗೆ ಹಾಗೂ ಪಡೆದ ನಂತರ ಅಭಿಪ್ರಾಯ ಪಡೆದರು. 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದ್ದು, ಪ್ರಮುಖವಾಗಿ 60 ವರ್ಷ ಮೇಲ್ಪಟ್ಟವರಿಗೆ ಬೇಗ ಲಸಿಕೆ ಪಡೆಯಲು ತಿಳಿಸಿ ಎಂದು ಮನವಿ ಮಾಡಿದರು.
Advertisement
ವ್ಯಾಕ್ಸಿನೇಷನ್ ಗಾಗಿ ನಗರದಲ್ಲಿ ಸುಮಾರು 500 ಸೈಟ್‍ಗಳಿದ್ದು, ಪ್ರತಿ ಸೈಟ್‍ನಲ್ಲಿಯೂ ಕನಿಷ್ಟ 100 -150 ವ್ಯಾಕ್ಸಿನೇಷನ್ ನೀಡುವ ಗುರಿ ಹೊಂದಲಾಗಿದೆ. ಅಲ್ಲದೆ ಈಗಿರುವ ಸೈಟ್ ಗಳ ಜೊತೆಗೆ ಹೆಚ್ಚುವರಿಯಾಗಿ ಅಗತ್ಯವಿರುವ ಕಡೆ ಸೈಟ್ ಗಳನ್ನು ತೆರೆದು ಹೆಚ್ಚು ವ್ಯಾಕ್ಸಿನೇಷನ್ ನೀಡಲು ಪಾಲಿಕೆ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಲಸಿಕೆ ಪಡೆಯುವವರಿಗೆ ಅವಶ್ಯಕವಿರುವ ಕಡೆ ವಾಹನಗಳ ವ್ಯವಸ್ಥೆಯನ್ನೂ ಅಯಾ ವಲಯ ಆಯುಕ್ತರ ಮಟ್ಟದಲ್ಲಿ ಮಾಡಲಾಗುವುದು ಎಂದರು.
ಬಾಷ್ ಸಂಸ್ಥೆ ಸಹಭಾಗಿತ್ವದಲ್ಲಿ ಕೋವಿಡ್ ಆರೈಕೆ ಕೇಂದ್ರವನ್ನು ಸ್ಥಾಪಿಸಿದ್ದು, ಇದನ್ನು ಪಾಲಿಕೆಗೆ ಪಡೆಯಲಿದ್ದೇವೆ. ಈ ಸಂಬಂಧ ಬಾಷ್ ಸಂಸ್ಥೆ ಹಾಗೂ ಪಾಲಿಕೆ ಜೊತೆ ಚರ್ಚೆ ನಡೆಯುತ್ತಿದ್ದು, ಕೋವಿಡ್ ಆರೈಕೆ ಕೇಂದ್ರ ಪ್ರಾರಂಭಿಸಲು ಇನ್ನೆರಡು ದಿನದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಆಯುಕ್ತರು ರವರು ತಿಳಿಸಿದರು.
ನಗರದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಎಲ್ಲ ವಲಯಗಳಲ್ಲಿ ಸುಮಾರು 50 ಹಾಸಿಗೆ ಸಾಮಥ್ರ್ಯದ 2 ಅಥವಾ 3 ಕೋವಿಡ್ ಆರೈಕೆ ಕೇಂದ್ರಗಳನ್ನು ಶೀಘ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ಸಣ್ಣ ಪ್ರಮಾಣದ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಿ ಮನೆಯಲ್ಲಿ ಪ್ರತ್ಯೇಕವಾಗಿರಲು ಸಾಧ್ಯವಾಗದಂತಹ ಸೋಂಕಿತರನ್ನು ಆರೈಕೆ ಕೇಂದ್ರಗಳಲ್ಲಿರಿಸಿ, ಚಿಕಿತ್ಸೆ ನೀಡಿ, ಆರೈಕೆ ಮಾಡಲಾಗವುದು ಎಂದರು.
ಕೋರಮಂಗಲದ ಫೋರಂ ಮಾಲ್ ಹತ್ತಿರವಿರುವ ಪ್ರೆಸ್ಟೀಜ್ ಅಪಾರ್ಟ್‍ಮೆಂಟ್ ನಲ್ಲಿನ ಟೆಸ್ಟಿಂಗ್ ಕಾರ್ಯ ವೀಕ್ಷಿಸಿದರು. ಅಪಾರ್ಟ್‍ಮೆಂಟ್ ನ ಪದಾಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಕೋರಿದರು.