-ಕಳೆದೊಂದು ವರ್ಷದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಚುರುಕು
-ಹಾಸಿಗೆ ಸಾಮಥ್ರ್ಯ ದುಪ್ಪಟ್ಟು, ಆಕ್ಸಿಜನ್ ಉತ್ಪಾದನೆಗೆ ಒತ್ತು
ಬೆಂಗಳೂರು: ದಿನಕ್ಕೆ ಒಂದೂವರೆ-ಎರಡು ಲಕ್ಷ ಕೋವಿಡ್ ಪರೀಕ್ಷೆ ನಡೆಸುವ ಸಾಮಥ್ರ್ಯ, 1,015 ಮೆಟ್ರಿಕ್ ಟನ್ ಆಕ್ಸಿಜನ್ ಲಭ್ಯತೆ, 22 ಸಾವಿರಕ್ಕೂ ಅಧಿಕ ಆಕ್ಸಿಜನ್ ಹಾಸಿಗೆ, ಅಗತ್ಯಕ್ಕೆ ತಕ್ಕಷ್ಟು ರೆಮ್ ಡಿಸಿವಿರ್ ಔಷಧಿ ಪೂರೈಕೆ ಸೇರಿದಂತೆ ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರಲು ಆರೋಗ್ಯ ಮೂಲ ಸೌಕರ್ಯವನ್ನು ರಾಜ್ಯ ಸರ್ಕಾರ ಗಣನೀಯವಾಗಿ ಅಭಿವೃದ್ಧಿಪಡಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ರವರು ಹೇಳಿದ್ದಾರೆ.
ಸಚಿವ ಡಾ.ಕೆ.ಸುಧಾಕರ್‌ರವರು ಎರಡೂ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಈ ಹಿಂದೆಯೇ ಸೂಚನೆ ನೀಡಿದ್ದು, ಅದರಂತೆ ಎರಡೂ ಇಲಾಖೆಗಳು ಒಂದಾಗಿ ಕಾರ್ಯನಿರ್ವಹಿಸಿ ಮೂಲಸೌಕರ್ಯ ಅಭಿವೃದ್ಧಿಪಡಿಸಿವೆ. ಇದರಿಂದಾಗಿ ಕೋವಿಡ್ ಎರಡನೇ ಅಲೆಯ ತೀವ್ರತೆಯನ್ನು ತಗ್ಗಿಸಲು, ರೋಗಿಗಳಿಗೆ ಸೂಕ್ತ ಕಾಲದಲ್ಲಿ ಉತ್ತಮ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ ಎಂದರು.
Advertisement
Advertisement
ಪರೀಕ್ಷೆ ಹೆಚ್ಚಳ: ಫೆಬ್ರವರಿ ಅಂತ್ಯಕ್ಕೆ ದಿನಕ್ಕೆ 60-70 ಸಾವಿರ ಪರೀಕ್ಷೆ ನಡೆಸುತ್ತಿದ್ದು, ನಂತರ ಒಂದೂವರೆ ಲಕ್ಷಕ್ಕೆ ಏರಿಸಲಾಯಿತು. ಮೇ 22 ರವರೆಗೆ, 2.85 ಕೋಟಿ ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 2.38 ಕೋಟಿ ಪರೀಕ್ಷೆಗಳು ಆರ್ ಟಿ-ಪಿಸಿಆರ್ ಟೆಸ್ಟ್‍ಗಳಾಗಿವೆ. ಕೇಂದ್ರ ಸರ್ಕಾರ 70:30 ಅನುಪಾತದಲ್ಲಿ ಆರ್‍ಟಿಪಿಸಿಆರ್ ಹಾಗೂ ರಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡಲು ಸೂಚಿಸಿದ್ದರೆ, ರಾಜ್ಯದಲ್ಲಿ ಶೇ.80%ಕ್ಕಿಂತ ಹೆಚ್ಚು ಪರೀಕ್ಷೆಗಳು ಆರ್ ಟಿ-ಪಿಸಿಆರ್ ಪರೀಕ್ಷೆಗಳಾಗಿವೆ. 2020 ರ ಫೆಬ್ರವರಿಯಲ್ಲಿ 2 ಲ್ಯಾಬ್ ಗಳಿದ್ದರೆ, ಈಗ 241 (91 ಸರ್ಕಾರಿ, 150 ಖಾಸಗಿ) ಲ್ಯಾಬ್ ಗಳಿವೆ ಎಂದು ಹೇಳಿದರು.
Advertisement
ಹಾಸಿಗೆ ಸಾಮಥ್ರ್ಯ ಏರಿಕೆ: 2020ರ ಮಾರ್ಚ್‍ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಆಸ್ಪತ್ರೆಗಳಲ್ಲಿ 1,970 ಆಕ್ಸಿಜನ್ ಹಾಸಿಗೆಗಳಿದ್ದು, 22,001 ಹೊಸದಾಗಿ ಅಳವಡಿಸಲಾಗಿದೆ. ಇದರಿಂದ ಒಟ್ಟು ಆಕ್ಸಿಜನ್ ಹಾಸಿಗೆ ಸಂಖ್ಯೆ 23,971ಕ್ಕೆ ಏರಿಕೆಯಾಗಿದೆ. 444 ಐಸಿಯು ಹಾಸಿಗೆ ಇದ್ದು, 701 ಹೊಸದಾಗಿ ಅಳವಡಿಸಲಾಗಿದೆ. ಇದರಿಂದ ಒಟ್ಟು ಐಸಿಯು ಹಾಸಿಗೆ ಸಂಖ್ಯೆ 1,145 ಕ್ಕೆ ಏರಿಕೆಯಾಗಿದೆ. 610 ವೆಂಟಿಲೇಟರ್ ಇದ್ದು, ಹೊಸದಾಗಿ 1,548 ಅಳವಡಿಸಿ ಒಟ್ಟು ಸಂಖ್ಯೆಯನ್ನು 2,158 ಕ್ಕೆ ಏರಿಸಲಾಗಿದೆ. ಹೊಸದಾಗಿ 1,248 ಎಚ್‍ಎಫ್‍ಎನ್‍ಸಿ ಹಾಸಿಗೆ ಅಳವಡಿಸಲಾಗಿದೆ ಎಂದು ಹೇಳಿದರು.
Advertisement
ವೈದ್ಯಕೀಯ ಶಿಕ್ಷಣ ಇಲಾಖೆಯಡಿಯ ಆಸ್ಪತ್ರೆಗಳಲ್ಲಿ, 4,700 ಆಕ್ಸಿಜನ್ ಹಾಸಿಗೆಗಳಿದ್ದು, ಹೊಸದಾಗಿ 4,705 ಅಳವಡಿಸಲಾಗಿದೆ. ಇದರಿಂದ ಒಟ್ಟು ಆಕ್ಸಿಜನ್ ಹಾಸಿಗೆ ಸಂಖ್ಯೆ 9,405 ಕ್ಕೆ ಏರಿಕೆಯಾಗಿದೆ. 341 ವೆಂಟಿಲೇಟರ್ ಇದ್ದು, ಹೊಸದಾಗಿ 305 ಅಳವಡಿಸಿ ಒಟ್ಟು ಸಂಖ್ಯೆಯನ್ನು 646 ಕ್ಕೆ ಏರಿಸಲಾಗಿದೆ. 15 ಎಚ್‍ಎಫ್‍ಎನ್ಸಿ ಹಾಸಿಗೆ ಇದ್ದು, 555 ಹೊಸದಾಗಿ ಅಳವಡಿಸಿದ್ದರಿಂದ ಒಟ್ಟು ಸಂಖ್ಯೆ 570 ಕ್ಕೆ ಏರಿಕೆಯಾಗಿದೆ. 151 ಕೆಎಲ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸೌಲಭ್ಯವಿದ್ದು, 73 ಕೆಎಲ್ ಅಳವಡಿಸಿ, ಒಟ್ಟು ಸಾಮಥ್ರ್ಯವನ್ನು 224 ಕೆಎಲ್ ಗೆ ಏರಿಸಲಾಗಿದೆ ಎಂದು ತಿಳಿಸಿದರು.
ವೈದ್ಯಕೀಯ ಆಮ್ಲಜನಕ: ರಾಜ್ಯದಲ್ಲಿ 815 ಟನ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಕೇಂದ್ರ ಸರ್ಕಾರದಿಂದ 1,015 ಟನ್ ಹಂಚಿಕೆಯಾಗಿದೆ. ಯಾದಗಿರಿ, ಕೆಜಿಎಫ್ ನಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ. ಡಿಆರ್ ಡಿಒ ನೆರವಿನಲ್ಲಿ 1,000 ಎಲ್ ಪಿಎಂ ಸಾಮಥ್ರ್ಯದ ಮೂರು ಆಕ್ಸಿಜನ್ ಘಟಕಗಳನ್ನು ಸಿವಿ ರಾಮನ್ ಆಸ್ಪತ್ರೆ, ಕಲಬುರ್ಗಿ ಇಎಸ್‍ಐ ಮೆಡಿಕಲ್ ಕಾಲೇಜು, ಕೊಪ್ಪಳ ಮೆಡಿಕಲ್ ಸೈನ್ಸಸ್ ಸಂಸ್ಥೆಯಲ್ಲಿ ಆರಂಭಿಸಲಾಗುತ್ತಿದೆ. ಬಳ್ಳಾರಿಯಲ್ಲಿ 1,000 ಆಕ್ಸಿಜನ್ ಹಾಸಿಗೆಯುಳ್ಳ ಆಸ್ಪತ್ರೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರವು 600 ಎಲ್‍ಪಿಎಂ ಸಾಮಥ್ರ್ಯದ 6 ಪಿಎಸ್‍ಎ ಘಟಕ ಆರಂಭಕ್ಕೆ ಅನುಮೋದನೆ ನೀಡಿದೆ. 10 ಆಕ್ಸಿಜನ್ ಎಕ್ಸ್ ಪ್ರೆಸ್ ರೈಲುಗಳಲ್ಲಿ ಸುಮಾರು 1000 ಮೆಟ್ರಿಕ್ ಟನ್ ಆಕ್ಸಿಜನ್ ರಾಜ್ಯಕ್ಕೆ ಪೂರೈಕೆಯಾಗಿದೆ ಎಂದರು.
ರೆಮ್ ಡಿಸಿವಿರ್: 5 ಲಕ್ಷ ವೈಲ್ಸ್ ಖರೀದಿಗೆ ಜಾಗತಿಕ ಟೆಂಡರ್ ಕರೆಯಲಾಗಿದೆ. ಮೇನಲ್ಲಿ 51,360 ವೈಲ್ ಖರೀದಿಗೆ ಆದೇಶಿಸಿದ್ದು, 11,000 ದೊರೆತಿದೆ. ಸಿಎಸ್‍ಆರ್ ನಡಿ, 900 ವೈಲ್ ಪಡೆಯಲಾಗಿದೆ. ಕೇಂದ್ರ ಸರ್ಕಾರದಿಂದ 56,943 ವೈಲ್ ಪಡೆಯಲಾಗಿದೆ ಎಂದು ತಿಳಿಸಿದರು.
ಕೋವಿಡ್ ಲಸಿಕೆ: ರಾಜ್ಯದ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಗುರಿಯೊಂದಿಗೆ ಹಂತಹಂತವಾಗಿ ಲಸಿಕೆ ನೀಡಲಾಗುತ್ತಿದೆ. ಮೇ 22 ರವರೆಗೆ, 1,20,14,015
ಲಸಿಕೆ ಡೋಸ್‍ಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ಪೂರೈಸಿರುವ 1,13,26,340 ಡೋಸ್ ಜೊತೆಗೆ ರಾಜ್ಯ ಸರ್ಕಾರ ಖರೀದಿ ಮಾಡಲು ಮುಂದಾಗಿರುವ ಲಸಿಕೆಯಲ್ಲಿ 14,94,170 ಲಭ್ಯವಾಗಿದೆ ಎಂದು ನುಡಿದರು.
ಕೋವಿಡ್ ನಂತರದ ಕಾಲದಲ್ಲಿ ಆರೋಗ್ಯ ಮೂಲಸೌಕರ್ಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. ಆರ್ಥಿಕ ಸಂಕಷ್ಟವಿದ್ದರೂ ಹೆಚ್ಚು ಸಂಪನ್ಮೂಲವನ್ನು ಬಳಸಿ ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಗಮನಹರಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ‘ಆರೋಗ್ಯ ಕರ್ನಾಟಕ’ ನಿರ್ಮಾಣ ಸಾಕಾರವಾಗಲಿದೆ ಎಂದು ಹೇಳಿದರು.