Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ನಿಭಾಯಿಸಲು ಸರ್ಕಾರಕ್ಕೆ ಎಚ್‍ಡಿಕೆ ಹತ್ತು ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ನಿಭಾಯಿಸಲು ಸರ್ಕಾರಕ್ಕೆ ಎಚ್‍ಡಿಕೆ ಹತ್ತು ಸಲಹೆ

Bengaluru City

ಕೋವಿಡ್ ನಿಭಾಯಿಸಲು ಸರ್ಕಾರಕ್ಕೆ ಎಚ್‍ಡಿಕೆ ಹತ್ತು ಸಲಹೆ

Public TV
Last updated: May 8, 2021 11:56 am
Public TV
Share
3 Min Read
HDK
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಮಿತಿ ಮೀರುತ್ತಿದ್ದು, ಆಕ್ಸಿಜನ್, ಬೆಡ್ ಕೊರತೆ ಕಾಡುತ್ತಿದೆ. ಅತಿಯಾದ ಸೋಂಕು ಪ್ರಕರಣಗಳು ಪತ್ತೆಯಾಗಿದ್ದರಿಂದ ಆಸ್ಪತ್ರೆ, ಆರೋಗ್ಯ ವ್ಯವಸ್ಥೆ, ಸರ್ಕಾರದ ಮೇಲೆ ತಡೆಯಲಾರದ ಒತ್ತಡ ಸೃಷ್ಟಿಯಾಗುತ್ತಿದೆ. ಹೀಗಾಗಿ ಎಷ್ಟೇ ಹೋರಾಟ ನಡೆಸಿದರೂ ನಿಭಾಯಿಸುವುದು ಕಷ್ಟಕರವಾಗಿದೆ. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕೊರೊನಾ ನಿರ್ವಹಣೆಗೆ ಸರ್ಕಾರಕ್ಕೆ 10 ಮಹತ್ವದ ಸಲಹೆಗಳನ್ನು ನೀಡಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ತಿಳಿಸಿರುವ ಅವರು, ಕೋವಿಡ್ ನ್ನು ಹೇಗೆ ತಡೆಯಬೇಕು, ಯಾವ ರೀತಿ ಇದರಿಂದ ಪಾರಾಗಬೇಕು ಎಂಬುದರ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಹೊಸ ಆಲೋಚನೆ, ಹೊಸ ಅವಕಾಶಗಳ ಬಗ್ಗೆ ಯೋಚಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ನನಗೆ ಪರಿಚಿತರಿರುವ ತಜ್ಞರು, ವೈದ್ಯರು, ಸಲಹೆಗಾರರ ಗುಂಪಿನೊಂದಿಗೆ ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಮುಖ ಎನಿಸುವ ಹತ್ತು ಸಲಹೆಗಳನ್ನು ಇಲ್ಲಿ ಪಟ್ಟಿ ಮಾಡಿದ್ದೇನೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂಬ ಆಶಾ ಭಾವ ನನ್ನದು ಎಂದು ತಿಳಿಸಿ, ನೀಡಿರುವ ಸಲಹೆಗಳ ಪಟ್ಟಿಯ ಫೋಟೋವನ್ನು ಹಾಕಿದ್ದಾರೆ.

ಕೋವಿಡ್‌ ತಡೆಯಲು ಪ್ರತಿಯೊಬ್ಬರೂ ಹೊಸ ಆಲೋಚನೆ, ಹೊಸ ಅವಕಾಶಗಳ ಬಗ್ಗೆ ಆಲೋಚಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ನನಗೆ ಪರಿಚಿತರಿರುವ ತಜ್ಞರು, ವೈದ್ಯರು, ಸಲಹೆಗಾರರೊಂದಿಗೆ ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಮುಖ ಎನಿಸುವ ಹತ್ತು ಸಲಹೆಗಳನ್ನು ಇಲ್ಲಿ ನೀಡುತ್ತಿದ್ದೇನೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂಬ ಆಶಾ ಭಾವ ನನ್ನದು. pic.twitter.com/kbQGM1Vjhj

— H D Kumaraswamy (@hd_kumaraswamy) May 8, 2021

ಫೀವರ್ ಕ್ಲಿನಿಕ್‍ಗಳು
ಪ್ರತಿ ವಾರ್ಡ್, ಗ್ರಾಮ ಪಂಚಾಯಿತಿ ಮಟ್ಟದಲ್ಲಿ 3-4 ಫೀವರ್ ಕ್ಲಿನಿಕ್‍ಗಳನ್ನು ಆರಂಭಿಸಬೇಕು. ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಇರುವವರಿಂದ ಆಸ್ಪತ್ರೆಗಳ ಮೇಲೆ ಬೀಳುತ್ತಿರುವ ಒತ್ತಡವನ್ನು ಈ ಮೂಲಕ ನಿಯಂತ್ರಿಸಬಹುದು. ಸೋಂಕಿತರನ್ನು ಪತ್ತೆ ಹಚ್ಚಲೂ ಈ ಫೀವರ್ ಕ್ಲಿನಿಕ್‍ಗಳು ನೆರವಾಗಬಲ್ಲವು.

ಸಿಬ್ಬಂದಿ ನಿಯೋಜನೆ
ವೈದ್ಯಕೀಯೇತರ ಬೋಧನಾ ಸಿಬ್ಬಂದಿ ಮತ್ತು ‘ರಾಷ್ಟ್ರೀಯ ಹೆಲ್ತ್ ಮಿಷನ್’ನ ಸಿಬ್ಬಂದಿಯನ್ನು ಕೋವಿಡ್ ನಿಯಂತ್ರಣಾ ವ್ಯವಸ್ಥೆಗೆ ನಿಯೋಜಿಸಬೇಕು. ಸಿಬ್ಬಂದಿ ಕೊರತೆ ಅನುಭವಿಸುತ್ತಿರುವ ಆಸ್ಪತ್ರೆಗಳು ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಇವರ ಸೇವೆಯನ್ನು ಅಗತ್ಯವಾಗಿ ಬಳಸಿಕೊಳ್ಳಬೇಕು.

DOCTOR 2

ಆಯುಷ್ ಕಾಲೇಜು, ಆಸ್ಪತ್ರೆಗಳ ಸೇವೆ ಬಳಕೆ
ಸೋಂಕಿನ ಲಕ್ಷಣವಿಲ್ಲದ ಅಥವಾ ಕಡಿಮೆ ಲಕ್ಷಣಗಳಿರುವ ಕೋವಿಡ್ ರೋಗಿಗಳಿಗೆ ರಾಜ್ಯದ ಆಯುಷ್ ಕಾಲೇಜುಗಳು ಮತ್ತು ಆಸ್ಪತ್ರೆಗಳು ಚಿಕಿತ್ಸೆ ನೀಡಬೇಕು. ಅವುಗಳು ತಮ್ಮಲ್ಲಿ ಲಭ್ಯವಿರುವ ಸಿಬ್ಬಂದಿಯ ನೆರವಿನಿಂದಲೇ ಆರೋಗ್ಯ ಸೇವೆ ನೀಡಿದರೆ, ಇತರೆ ಆಸ್ಪತ್ರೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಬಹುದು. ಎಲ್ಲರಿಗೂ ಆರೋಗ್ಯ ಸೇವೆ ಸಿಗುವಂತೆ ಮಾಡಬಹುದು.

ನಿಗಾ ಕೇಂದ್ರಗಳು
ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳು, ಹೋಟೆಲ್‍ಗಳನ್ನು ಸೋಂಕು ಲಕ್ಷಣ ರಹಿತರ ಆರೈಕೆ ಮತ್ತು ನಿಗಾ ಕೇಂದ್ರಗಳಾಗಿ ಪರಿವರ್ತಿಸಬೇಕು. ಲಕ್ಷಣಗಳು ಕಾಣಿಸಿಕೊಂಡು, ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರನ್ನು ಮಾತ್ರ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ವರ್ಗಾಯಿಸಬೇಕು.

hospital bed
ಸಾಂದರ್ಭಿಕ ಚಿತ್ರ

ಹಾಸಿಗೆ ನೀಡಬೇಕಾದ್ದನ್ನು ಯಾರು ನಿರ್ಧರಿಸಬೇಕು?
ವಾರ್ಡ್, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿರುವ ಕ್ಲಿನಿಕ್‍ಗಳು ಮತ್ತು ಆರೋಗ್ಯ ಸಿಬ್ಬಂದಿ ಮಾತ್ರ ಹಾಸಿಗೆಗಾಗಿ ವಾರ್ ರೂಂಗಳಿಗೆ ಶಿಫಾರಸು ಮಾಡಬೇಕು. ಹಾಸಿಗೆ ಒದಗಿಸುವ ಅಧಿಕಾರ, ಹೊಣೆಗಾರಿಕೆಯನ್ನು ಅವರಿಗೇ ನೀಡಬೇಕು. ಹಾಸಿಗೆ ನೀಡಬೇಕೇ ಬೇಡವೇ ಎಂಬುದನ್ನು ಡೇಟಾ ಎಂಟ್ರಿ ಆಪರೇಟರ್‍ಗಳು ನಿರ್ಧರಿಸಬಾರದು.

ಆಸ್ಪತ್ರೆಗೊಬ್ಬ ಅಧಿಕಾರಿ
ಎಲ್ಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವ್ಯವಸ್ಥಾಪನೆ ಮೇಲೆ ನಿಗಾ ವಹಿಸಲು ಐಎಎಸ್ ಮತ್ತು ಕೆಎಎಸ್ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಬೇಕು. ಅವರು ರೋಗಿಗಗಳ ಹಾಸಿಗೆ, ಔಷಧ, ಆರೈಕೆ, ಆಹಾರ ಪೂರೈಕೆ ವ್ಯವಸ್ಥೆಯನ್ನು ನಿಭಾಯಿಸಬೇಕು. ಅದರ ಜೊತೆಗೆ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರೂ ಸೇರಿದಂತೆ ಆರೋಗ್ಯ ಸಿಬ್ಬಂದಿಯ ಅಗತ್ಯಗಳನ್ನು ಪೂರೈಸಬೇಕು.

Corona Bed

ಆಸ್ಪತ್ರೆ ಅಧಿಕಾರಿಯ ಹೊಣೆಗಾರಿಕೆಗಳು
ನಿರ್ದಿಷ್ಟ ಆಸ್ಪತ್ರೆಗೆ ನಿಯೋಜಿಸಲಾದ ಅಧಿಕಾರಿಯು ಪ್ರತಿನಿತ್ಯ ತನ್ನ ಜವಾಬ್ದಾರಿಯ ಆಸ್ಪತ್ರೆಗೆ ಕಡ್ಡಾಯವಾಗಿ ಭೇಟಿ ನೀಡುವಂತೆ ತಾಕೀತು ಮಾಡಬೇಕು. ರೋಗಿಗಳು ಮತ್ತು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯ ಬೇಕು-ಬೇಡಗಳ ಮೇಲೆ ಅಧಿಕಾರಿಗಳು ಗಮನಹರಿಸಬೇಕು. ಸಮಸ್ಯೆ ಬಗೆಹರಿಸುವ ಅಧಿಕಾರ, ಹೊಣೆಗಾರಿಕೆ, ಸಂಪನ್ಮೂಲವನ್ನು ಸರ್ಕಾರ ನೀಡಬೇಕು.

ಸ್ವಯಂ ಸೇವಕರು, ಯುಕವರಿಗೆ ಕರೆ
ಕೋವಿಡ್ ವಿರುದ್ಧ ಅವಿರತವಾಗಿ ಹೋರಾಡುತ್ತಿರುವ, ನಾಗರಿಕರ ಪ್ರಾಣ ರಕ್ಷಣೆಯ ಕಾರ್ಯದಲ್ಲಿ ಸೆಣಸುತ್ತಿರುವ ಅರೋಗ್ಯ ವ್ಯವಸ್ಥೆಯ ನೆರವಿಗೆ ಬರುವಂತೆ ಯುವಕರಿಗೆ, ಸ್ವಯಂ ಸೇವಕರಿಗೆ ಸರ್ಕಾರ ಕರೆ ನೀಡಬೇಕು. ಅವರ ಸೇವೆ ಪಡೆಯುವ ಜೊತೆಗೆ, ಕೋವಿಡ್ ವಿರುದ್ಧ ಹೋರಾಟಕ್ಕೆ ಉಪಯುಕ್ತ ಎನಿಸುವ ಅವರ ಚಿಂತನೆಗಳನ್ನೂ ಸರ್ಕಾರ ಪ್ರೋತ್ಸಾಹಿಸಬೇಕು.

doctor corona

ಲಸಿಕೆ ಮತ್ತು ಜಾಗೃತಿ
ಫೀವರ್ ಕ್ಲಿನಿಕ್‍ಗಳ ಹಂತದಲ್ಲಿಯೂ ಲಸಿಕೆ ಲಭ್ಯವಾಗಬೇಕು. ಲಸಿಕೆಯು ಕೋವಿಡ್ ಅನ್ನು ನಿಯಂತ್ರಿಸಬಲ್ಲದು ಎಂದು ಜಾಗೃತಿ ಮೂಡಿಸುವ ಕಾರ್ಯವೂ ಇಲ್ಲಿಂದಲೇ ಆರಂಭವಾಗಬೇಕು.

ಅರ್ಹರು ಖಾಯಂ ಆಗಬೇಕು
ಆರೋಗ್ಯ ಇಲಾಖೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಸಿಬ್ಬಂದಿಯಲ್ಲಿ ಅರ್ಹರನ್ನು ಸರ್ಕಾರ ಕೂಡಲೇ ಖಾಯಂಗೊಳಿಸಬೇಕು.

corona vaccine students 4

ಹೀಗೆ 10 ಸಲಹೆಗಳನ್ನು ಕುಮಾರಸ್ವಾಮಿಯವರು ನೀಡಿದ್ದು, ಈ ಬಗ್ಗೆ ಸರ್ಕಾರ ಯಾವ ರೀತಿ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

TAGGED:AdviceCorona VirusGovernment of Karnatakahd kumaraswamyPublic TVಎಚ್ ಡಿ ಕುಮಾರಸ್ವಾಮಿಕರ್ನಾಟಕ ಸರ್ಕಾರಕೊರೊನಾ ವೈರಸ್ಪಬ್ಲಿಕ್ ಟಿವಿಸಲಹೆ
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

Jaish e Mohammed commander Saifullah
Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
By Public TV
29 minutes ago
Three guilty in murder case and Israeli Tourist Rape case
Court

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

Public TV
By Public TV
31 minutes ago
Anthropic
Bengaluru City

ಮಡುರೋ ಕಿಡ್ನಾಪ್‌ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್‌

Public TV
By Public TV
42 minutes ago
Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
1 hour ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
1 hour ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?