ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಶತಕದ ಆಸುಪಾಸಿನಲ್ಲಿ ಪತ್ತೆಯಾಗುತ್ತಿದ್ದು, ಇಷ್ಟಾದರೂ ಅಂಗಡಿ ಮಾಲೀಕರು ಡೋಂಟ್ ಕೇರ್ ಎನ್ನುತ್ತಿದದ್ದಾರೆ. ಕೊರೊನಾ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ.
Advertisement
ಈ ಹಿನ್ನೆಲೆಯಲ್ಲಿ ಕೊಡಗಿನ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಎಸ್‍ಪಿ ಕ್ಷಮಾ ಮೀಶ್ರ ಅವರು ಇಂದು ಕೊಡಗು ಜಿಲ್ಲೆಯ ಕುಶಾಲನಗರದ ರಥ ಬೀದಿಗೆ ದಿಡೀರ್ ಭೇಟಿ ನೀಡಿ, ರಥ ಬೀದಿಯಲ್ಲಿರುವ ಅಂಗಡಿಗಳ ಬಳಿ ಪರಿಶೀಲನೆ ನಡೆಸಿದರು. ಅಂಗಡಿಗಳಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದ ಕೋಡಲೇ 10ಕ್ಕೂ ಹೆಚ್ಚು ಅಂಗಡಿಗಳನ್ನು ಸೀಜ್ ಮಾಡಿಸಿದ್ದಾರೆ.
Advertisement
Advertisement
ರಥ ಬೀದಿಯಲ್ಲಿರುವ ಬಟ್ಟೆ ಅಂಗಡಿ, ರೇಸಾನ್ ಹಾಗೂ ಚಿನ್ನದಂಗಡಿಗಳಿಗೆ ಬೀಗ ಹಾಕಿಸಿದ್ದಾರೆ. ಕೊಡಗಿನಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಸ್ಫೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸ್ವತಃ ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದ ಹತ್ತಕ್ಕೂ ಹೆಚ್ಚು ವ್ಯಾಪಾರಸ್ಥರ ಅಂಗಡಿಗಳಿಗೆ ಬೀಗ ಹಾಕಿಸಿ ಜಿಲ್ಲೆಯ ಜನರಿಗೆ ಕೋವಿಡ್ ನಿಯಮಗಳ ಪಾಲನೆ ಕುರಿತು ಎಚ್ಚರಿಕೆ ನೀಡಿದ್ದಾರೆ.