ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ಶ್ರಮಪಡುತ್ತಿದೆ. ಇಂದು ಧಾರವಾಡ (ಪೂರ್ವ) ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಸಮರ ಸಾರಿದ್ದಾರೆ.
Advertisement
ಸರ್ಕಾರದ ಕೋವಿಡ್-19ರ ಮಾರ್ಗಸೂಚಿ ಅನ್ವಯ ಬಸ್, ಮೋಟಾರು ಕ್ಯಾಬ್, ಟೆಂಪೋ ಟ್ರಾವೆಲರ್ ವಾಹನಗಳಿಗೆ ಅನುಮತಿ ನೀಡಿರುವ ಆಸನಕ್ಕಿಂತ ಹೆಚ್ವಿನ ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ವಾಹನಗಳಿಗೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ವಾಹನಗಳು ಶೇ.50ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದುಕೊಂಡು ಹೋಗಬೇಕಿದ್ದು, ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಶೇ.50ಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Advertisement
Advertisement
ಕಾರ್ಯಾಚರಣೆಯಲ್ಲಿ ಕೆಎಸ್‍ಆರ್‍ಟಿಸಿಯ 2, ಬೇಂದ್ರೆ ನಗರ ಸಾರಿಗೆಯ 3, ಬಿಆರ್‍ಟಿಎಸ್ ಕಂಪನಿಯ 2, ಪಿಎಸ್‍ಎ 1 ಬಸ್ ಹಾಗೂ 3 ಮೋಟಾರು ಕ್ಯಾಬ್‍ಗಳು ಹಾಗೂ 3 ಮ್ಯಾಕ್ಸಿಕ್ಯಾಬ್ ಸೇರಿ ಒಟ್ಟು 14 ವಾಹನಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಒಂದು ಬೇಂದ್ರೆ ನಗರ ಸಾರಿಗೆಯ ಬಸ್ ಹಾಗೂ 3 ಮ್ಯಾಕ್ಸಿಕ್ಯಾಬ್ ಸೇರಿದಂತೆ ಒಟ್ಟು 4 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.