ಮಡಿಕೇರಿ: ಕೊರೊನಾ ಎರಡನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ, ಜಿಲ್ಲಾಡಳಿತ ವಿವಿಧ ರೀತಿಯಲ್ಲಿ ಕಾನೂನು ಕ್ರಮಗಳನ್ನು ಕೈಗೊಂಡಿದೆ. ಆದರೆ, ಕೊಡಗು ಜಿಲ್ಲೆ ವಿರಾಜಪೇಟೆ ಪಟ್ಟಣದ ಸುಂಕದಕಟ್ಟೆ ಮಕ್ಕ ಮಸೀದಿಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಏಳು ಜನ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
Advertisement
ಸುಂಕದಕಟ್ಟೆ ಮಕ್ಕ ಮಸೀದಿಯ ಒಳಾಂಗಣದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ್ ಅವರು ಕಳೆದ ರಾತ್ರಿ ದಿಢೀರ್ ದಾಳಿ ನಡೆಸಿದಾಗ ಏಳು ಜನ ಸಾಮೂಹಿಕ ಪ್ರಾರ್ಥನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ, ಕೋವಿಡ್ ನಿಯಮ ಉಲ್ಲಂಘಿಸಿದ್ದ ಹತ್ತು ಅಂಗಡಿಗಳಿಗೆ ಬೀಗ ಜಡಿದ ನಗರ ಸಭೆ
Advertisement
Advertisement
ಮಸೀದಿಯ ಹೊರಭಾಗದಲ್ಲಿ ಕೋವಿಡ್-19 ನಿಯಮ ಪಾಲಿಸಲು ಮಸೀದಿಯನ್ನು ಮುಚ್ಚಲಾಗಿದೆ ಎಂಬ ನಾಮಫಲಕ ಅಳವಡಿಸಿ, ಒಳಗೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಪಾಡದೇ ನಮಾಜ್ ಮಾಡುತ್ತೀದ್ದ ಏಳು ಜನರ ವಿರುದ್ಧ ವಿರಾಜಪೇಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement