– ಸಾಂತ್ವನ ಯೋಜನೆ ಸ್ಥಗಿತಕ್ಕೆ ಸರ್ಕಾರದ ವಿರುದ್ಧ ಎಚ್‍ಡಿಕೆ ಆಕ್ರೋಶ
ಬೆಂಗಳೂರು: ಸಾಂತ್ವಾನ ಯೋಜನೆ ಸ್ಥಗಿತಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು ಸಾಂತ್ವನ ಯೋಜನೆ ನಿಲ್ಲಿಸದಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. “ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲು ಹೊರಟಿರುವುದು ಕೋವಿಡ್-19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ” ಎಂದು ಟ್ವೀಟ್ ಮಾಡಿದ್ದಾರೆ.
Advertisement
ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲು ಹೊರಟಿರುವುದು ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ.
ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ.
1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 15, 2020
Advertisement
ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಜಿಲ್ಲಾ, ತಾಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುವ ಕೆಲಸದಲ್ಲಿ ಮಗ್ನವಾಗಿದ್ದವು ಎಂದು ತಿಳಿಸಿದ್ದಾರೆ.
Advertisement
ಲಾಕ್‍ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿದ್ದಾರೆ.
Advertisement
ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು.
3/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 15, 2020