ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ಕೆ.ಆರ್.ನಗರದ ವಿಧಾನ ಸಭಾ ಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕೊರೊನಾ ಸೋಂಕಿತರನ್ನು ಮಾತನಾಡಿಸಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
Advertisement
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಶೇಖರ್, ಬೆಂಗಳೂರು ಬಿಟ್ಟರೆ ಅತೀ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿರುವುದೇ ಮೈಸೂರು ಜಿಲ್ಲೆಯಲ್ಲಿ. ಹೀಗಾಗಿ ಕೆ.ಆರ್.ನಗರದ ವೈದ್ಯಾಧಿಕಾರಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿ ಹಾಗೂ ಕಡ್ಡಾಯವಾಗಿ ಸ್ವಾಬ್ ಟೆಸ್ಟ್ ಮಾಡಿಸಿ. ಕೆ.ಆರ್.ನಗರಕ್ಕೂ ಅನಿರೀಕ್ಷಿತ ಭೇಟಿ ನೀಡುವೆ. ಹೀಗಾಗಿ ನೀವೂ ಸಹ ಮನೆ ಮನೆ ಸರ್ವೆಮಾಡಿ ಮೇ31 ರೊಳಗಾಗಿ ಮುಗಿಸಬೇಕು. ಆರೋಗ್ಯ ಕೇಂದ್ರದಲ್ಲಿ ಯಾರಿಗೂ ಯಾವ ಸಮಸ್ಯೆಗಳು ಉಂಟಾಗದಂತೆ ನೋಡಿಕೊಂಡಿರುವ ಸಾ.ರಾ.ಮಹೇಶ್ ಅವರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.
Advertisement
ಕೋವಿಡ್ ಸಂಕಷ್ಟದ ಸಮಯದಲ್ಲಿ ಆಸ್ಪತ್ರೆಗಳಿಗೆ ಸಹಾಯ ಮಾಡಿದವರ ಹೆಸರನ್ನು ಬರೆದುಕೊಳ್ಳಿ ಅಂತಹವರಿಗೆ ಜಿಲ್ಲಾಡಳಿದಿಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಅವರಿಗೆ ಪ್ರಶಸ್ತಿ ಪತ್ರವನ್ನೂ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
Advertisement
Advertisement
ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕಳೆದ ಒಂದು ತಿಂಗಳಲ್ಲಿ ಎರೆಡೆರಡು ಬಾರಿ ಎಲ್ಲಾ ತಾಲ್ಲೂಕು ಆರೋಗ್ಯ ಕೇಂದ್ರಗಳಿಗೆ ಭೇಟಿ ಮಾಡಿ ಸಕ್ರಿಯವಾಗಿ ಇಲ್ಲಿನ ಪರಿಸ್ಥಿತಿಯನ್ನು ಹಾಗೂ ಇಲ್ಲಿನ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ನಗರದಲ್ಲಿ ಹೆಚ್ಚಾಗುತ್ತಿದ್ದ ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ವ್ಯವಸ್ಥಿತವಾದಂತಹ ಪ್ರಯತ್ನದಿಂದಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯು ಹೆಚ್ಚಳವಾಗುತ್ತಿದ್ದು, ಹಲವಾರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಸಾ.ರಾ.ಮಹೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ತಹಶೀಲ್ದಾರ್ ಮಂಜುಳಾ, ತಾಲ್ಲೂಕು ಆರೋಗ್ಯಾಧಿಕಾರಿ ಮಹೇಂದ್ರಪ್ಪ, ಎ.ಹೇಮಂತ್ ಕುಮಾರ್ ಗೌಡ ಸೇರಿದಂತೆ ಇತರರು ಹಾಜರಿದ್ದರು.