ನವದೆಹಲಿ: ಕೇಂದ್ರ ಸರ್ಕಾರ ಅಭಿವೃದ್ಧಿ ಪಡಿಸಿರುವ ಕೋವಿನ್ ವೆಬ್‍ಸೈಟ್ ಹ್ಯಾಕ್ ಆಗಿದೆ ಎಂಬ ಮಾಧ್ಯಮ ವರದಿಗಳನ್ನು ಕೇಂದ್ರ ಸರ್ಕಾರ ನಿರಾಕರಿಸಿ, ಅದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.
Advertisement
ಕೋವಿನ್ ಪೋರ್ಟಲ್ ಹ್ಯಾಕ್ ಆಗಿದ್ದು, ಅದರ ದತ್ತಾಂಶ ಸೋರಿಕೆಯಾಗಿದೆ ಎಂದು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿತ್ತು. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ:ಖಾಸಗಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದಿಂದ ಲಸಿಕೆ ದರ ಪ್ರಕಟ- ಯಾವ ಲಸಿಕೆಗೆ ಎಷ್ಟು ರೂಪಾಯಿ?
Advertisement
Union Health Ministry & Chairman, Empowered Group on Vaccine Administration debunk news of hacking of #CoWIN.
CoWIN stores all vaccination data in a safe & secure digital environment- Dr @rssharma3@PMOIndia @drharshvardhan @AshwiniKChoubey pic.twitter.com/5yeREnM3HO
— Ministry of Health (@MoHFW_INDIA) June 10, 2021
Advertisement
ಕೋವಿನ್ ಪೋರ್ಟಲ್ ಹ್ಯಾಕ್ ಆಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು. ಅಂತಹ ಯಾವುದೇ ಘಟನೆಗಳು ನಡೆದಿಲ್ಲ. ಕೋವಿನ್ ಪೋರ್ಟಲ್ ನಲ್ಲಿನ ಎಲ್ಲಾ ವ್ಯಾಕ್ಸಿನೇಷನ್ ಡೇಟಾಗಳು ಸುರಕ್ಷಿತವಾಗಿದೆ. ಎಲ್ಲೂ ಕೂಡ ಡೇಟಾಗಳು ಸೊರಿಕೆಯಾಗಿಲ್ಲ. ಸುರಕ್ಷಿತ ಡಿಜಿಟಲ್ ಲಾಕರ್ ನಲ್ಲಿ ಡೇಟಾ ಸಂಗ್ರಹಿಸಲಾಗುತ್ತಿದ್ದು, ಈ ಕುರಿತು ಹಲವು ಸುಳ್ಳು ಸುದ್ದಿಗಳು ಹರಿದಾಡಿವೆ ಎಂದಿದೆ. ಇದನ್ನೂ ಓದಿ:ಜೂನ್ 21ರಿಂದ ಕೇಂದ್ರದಿಂದ ಎಲ್ಲರಿಗೂ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ
Advertisement
ಈ ಕುರಿತು ಸ್ಪಷ್ಟನೆ ನೀಡಿರುವ ಕೋವಿನ್ ಪೋರ್ಟಲ್ ಮುಖ್ಯಸ್ಥ ಡಾ.ಆರ್.ಎಸ್.ಶರ್ಮಾ ಪ್ರತಿಕ್ರಿಯಿಸಿ, ಕೇಂದ್ರ ಆರೋಗ್ಯ ಸಚಿವಾಲಯವು ಕೋವಿನ್ ಪೋರ್ಟಲ್ ಹ್ಯಾಕ್ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಲಸಿಕೆ ಆಡಳಿತದ ಅಧಿಕಾರ ಗುಂಪು (ಇಜಿವಿಎಸಿ) ಈ ವಿಷಯವನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (ಎಂಇಟಿವೈ) ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡವು ತನಿಖೆ ನಡೆಸುತ್ತಿದೆ. ಕೋವಿನ್ ವೆಬ್‍ಸೈಟ್ ಅನ್ನು ಹ್ಯಾಕ್ ಮಾಡಲಾಗಿದೆ ಎಂಬ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು. ದತ್ತಾಂಶಗಳು ಹೊರಗಿನ ಯಾವುದೇ ಘಟಕದೊಂದಿಗೆ ಹಂಚಿಕೆ ಆಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ದೋಷ ಇದ್ಯಾ? – ಕೆಲ ನಿಮಿಷದಲ್ಲಿ ಸರಿ ಮಾಡಿ