ಮಂಗಳೂರು: ರಾಜ್ಯದಲ್ಲಿರುವ ಕ್ರೈಸ್ತರಲ್ಲೂ ಬಹಳಷ್ಟು ಮಂದಿ ಬಡವರಿದ್ದಾರೆ. ಹೀಗಾಗಿ ಕ್ರೈಸ್ತ ಅಭಿವೃದ್ಧಿ ಪ್ರಾಧಿಕಾರವನ್ನು ತಕ್ಷಣ ರಚನೆ ಮಾಡಬೇಕು ಎಂದು ಮಾಜಿ ಎಂಎಲ್‌ಸಿ, ಕೆಪಿಸಿಸಿ ವಕ್ತಾರ ಐವಾನ್ ಡಿಸೋಜಾ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್‍ವೈ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿದ್ದಾರೆ. ಅವರಲ್ಲಿರುವ ಬಡವರಿಗೆ ಸಹಕಾರಿಯಾಗುತ್ತೆ ಎಂದಿದ್ದಾರೆ. ನಮ್ಮ ಕ್ರೈಸ್ತರಲ್ಲೂ ಬಡವರಿದ್ದಾರೆ. ಹೀಗಾಗಿ ಪ್ರಾಧಿಕಾರ ರಚಿಸಿ ಎಂದು ಹೇಳಿದ್ದಾರೆ.
Advertisement
Advertisement
ಈ ಹಿಂದೆಯೇ ಪ್ರಾಧಿಕಾರ ರಚನೆಗೆ ನಮ್ಮ ಒತ್ತಾಯವಿತ್ತು. ಆದರೆ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ. ಕ್ರೈಸ್ತ ಸಮುದಾಯದ ಮೌನ, ವೀಕ್ನೇಸ್ ಅಲ್ಲ. ಕ್ರೈಸ್ತರು ಮಂಗಗಳು ಎಂದು ಸಿಎಂ ಭಾವಿಸಿಕೊಂಡಿದ್ದಾರೆ. ಈ ಹಿಂದೆ ಇದ್ದ ಕ್ರೈಸ್ತ ಪ್ರಾಧಿಕಾರಕ್ಕೆ ಅನುಮೋದನೆ ನೀಡುತ್ತೇನೆ. 55 ಕೋಟಿ ಮೀಸಲಿಟ್ಟಿದ್ದೇನೆ ಎಂದಿದ್ದ ಸಿಎಂ ಬಳಿಕ ಯಾಕೆ ಮೌನವಾಗಿದ್ದಾರೆ ಎಂದು ತಕ್ಷಣವೇ ಉತ್ತರ ಕೊಡಬೇಕೆಂದು ಒತ್ತಾಯ ಮಾಡಿದ್ದಾರೆ.
Advertisement
Advertisement
ಸರ್ಕಾರ ನಮ್ಮ ಮನವಿಗೆ ಸರಿಯಾಗಿ ಸ್ಪಂದಿಸದೇ ಇದ್ದಲ್ಲಿ ರಾಜ್ಯದ ಕ್ರೈಸ್ತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ. ಜನ ಬೀದಿಗೆ ಬಂದು ಹೋರಾಟ ಮಾಡಿದರೆ ಅದಕ್ಕೆ ಸರ್ಕಾರವೇ ನೇರ ಹೊಣೆ, ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.