ಬೆಂಗಳೂರು: ರೈತನ ಜೊತೆಗೆ ಬಾಯಿಗೆ ಬಂದಂತೆ ಮಾತನಾಡಿ ಟೀಕೆಗೆ ಗುರಿಯಾಗಿದ್ದ ಉಮೇಶ್ ಕತ್ತಿ ಈಗ ಕ್ಷಮೆಯಾಚಿಸಿದ್ದಾರೆ.
Advertisement
ರೈತನ ಜೊತೆಗಿನ ಮಾತುಕತೆಯ ಆಡಿಯೋ ವೈರಲ್ ವಿಚಾರ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಲಾಸ್ ತೆಗೆದುಕೊಂಡ ಬಳಿಕ ಇದೀಗ ಉಮೇಶ್ ಕತ್ತಿ ಅವರು ಹೇಳಿಕೆ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ.
Advertisement
ಆಡಿಯೋ ವೈರಲ್ ಆಗುತ್ತಿದ್ದಂತೆ ಉಮೇಶ್ ಕತ್ತಿ ವಿರುದ್ಧ ಸಿಎಂ ಯಡಿಯೂರಪ್ಪ ಅಸಮಾಧಾನ ಹೊರಹಾಕಿದರು. ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರು, ರೈತನೊಬ್ಬ 5 ಕೆ.ಜೆ ಅಕ್ಕಿ ಬದಲಾಗಿ 3 ಕೆ.ಜಿ ನೀಡುತ್ತಿರುವುದು ಸಾಯಬೇಕಾ ಬದುಕಬೇಕಾ ಎಂದು ಕೇಳಿದಾಗ ಸಾಯಿ ಅಂತ ಹೇಳಿರುವುದು ಒಬ್ಬ ಸಚಿವನಾಗಿ ಸರಿಯಲ್ಲ. ಆ ಭಾಗದಲ್ಲಿರುವ ಜನರಿಗೆ ಗೋಧಿ ಬೇಡವಾದರೆ 5 ಕೆ.ಜಿ ಅಕ್ಕಿಯನ್ನು ಕೊಡಲು ವ್ಯವಸ್ಥೆ ಮಾಡಲಾಗುವುದು. ಉಮೇಶ್ ಕತ್ತಿ ಅವರ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದರು.
Advertisement
Advertisement
ಬಳಿಕ ಎಚ್ಚೆತ್ತುಕೊಂಡ ಉಮೇಶ್ ಕತ್ತಿ ಇದೀಗ ತನ್ನ ಹೇಳಿಕೆ ಕುರಿತಾಗಿ ಕ್ಷೆಮೆಯಾಚಿಸಿದ್ದಾರೆ. ಈ ಮೂಲಕ ಈ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನ ಪಟ್ಟಿದ್ದಾರೆ.
ಆಗಿದ್ದೇನು..?
ರೈತ ಸಂಘ ಗದಗ ಜಿಲ್ಲೆಯ ಕುರ್ತಕೋಟೆ ಗ್ರಾಮದ ಕಾರ್ಯಕರ್ತ ಈಶ್ವರ ಆರ್ಯರ ಅವರು ಕತ್ತಿಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಈಶ್ವರ ಅವರು ಪಡಿತರ ಅಕ್ಕಿ ಕಡಿತಗೊಳಿಸಿರುವುದರ ಸಂಬಂಧ ಸಚಿವರನ್ನು ಪ್ರಶ್ನಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ ಕೊಡ್ತೀವಿ. ಲಾಕ್‍ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತೆ. ಮುಂದಿನ ತಿಂಗಳಿನಿಂದ ಅಕ್ಕಿ ಕೊಡಲಾಗುವುದು ಎಂದು ಕತ್ತಿ ಉತ್ತರಿಸಿದ್ದಾರೆ.
ಈ ವೇಳೆ ಮಾತು ಮುಂದುವರಿಸಿದ ಈಶ್ವರ, ಲಾಕ್‍ಡೌನ್ ಇದೆ ಅಲ್ಲಿಯವರೆಗೆ ಉಪವಾಸ ಸಾಯೋದಾ ಎಂದು ಮರುಪ್ರಶ್ನೆ ಹಾಕಿದ್ದಾರೆ. ಆಗ ಸಚಿವರು, ಸಾಯೋದು ಒಳ್ಳೆಯದು, ಅದಕ್ಕಿಂತ ಮೊದಲು ಅಕ್ಕಿ ಮಾರಾಟ ಮಾಡೋ ದಂಧೆ ನಿಲ್ಲಿಸಿ ಎಂದು ಉಡಾಫೆಯ ಮಾತಾಡಿದ್ದಾರೆ. ಅಲ್ಲದೆ ಫೋನ್ ಮಾಡಬೇಡಿ ಎಂದು ಹೇಳಿ ಕಾಲ್ ಕಟ್ ಮಾಡಿದ್ದರು.