ರಾಯಚೂರು: ಲಿಂಗಸುಗೂರಿನ ಅಡವಿಬಾವಿ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆಗೆ ಹೆರಿಗೆಯಾಗಿದ್ದು ತಾಯಿ, ಮಗು ಆರೋಗ್ಯದಿಂದಿದ್ದಾರೆ.
ಮಹಾರಾಷ್ಟ್ರದ ಪುಣೆಯಿಂದ ಬಂದಿದ್ದ ಕುಟುಂಬವನ್ನು ಕ್ವಾರಂಟೈನ್ ಮಾಡಲಾಗಿತ್ತು. ಹೆರಿಗೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕಳುಹಿಸಲು ತಯಾರಿ ನಡೆದಿತ್ತು. ಅಷ್ಟರಲ್ಲೇ ಹೆರಿಗೆ ನೋವು ಹಿನ್ನೆಲೆ ಸಿಬ್ಬಂದಿ ಕಣ್ತಪ್ಪಿಸಿ ಖಾಸಗಿ ಆಸ್ಪತ್ರೆಗೆ ತೆರಳಲು ಪತಿ, ಪತ್ನಿ ಇಬ್ಬರು ಮಕ್ಕಳು ಪರಾರಿಯಾಗಿದ್ದರು. ಅವರ ಸ್ವಗ್ರಾಮ ಲಿಂಗಸುಗೂರಿನ ಹಾಲುಬಾವಿ ತಾಂಡ ಬಳಿ ಸಂಬಂಧಿಕರ ಮನೆಯಲ್ಲಿ ಹೆರಿಗೆಯಾಗಿದೆ. ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ.
Advertisement
Advertisement
ಹೆರಿಗೆ ಬಳಿಕ ಕುಟುಂಬವನ್ನು ಲಿಂಗಸುಗೂರಿನ ರೊಡಲಬಂಡಾ ಆಸ್ಪತ್ರೆಗೆ ಕರೆತರಲಾಗಿದೆ. ಆಸ್ಪತ್ರೆ ಕ್ವಾಟ್ರಸ್‍ನಲ್ಲೇ ಐಸೋಲೇಷನ್ ವಾರ್ಡ್ ನಿರ್ಮಾಣ ಮಾಡಲಾಗಿದ್ದು, ನಾಲ್ಕು ಜನರ ಗಂಟಲು ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ಬಾಣಂತಿ, ಪತಿ, ಇಬ್ಬರು ಮಕ್ಕಳನ್ನ ಐಸೋಲೇಷನ್ ವಾರ್ಡಿನಲ್ಲಿಡಲಾಗಿದೆ. ಹೆರಿಗೆ ಹಿನ್ನೆಲೆ ಸ್ಥಳೀಯರ ಮಾಹಿತಿ ಮೇರೆಗೆ ಕುಟುಂಬವನ್ನ ಪತ್ತೆ ಹಚ್ಚಿ ಆರೋಗ್ಯ ಇಲಾಖೆ ಸಿಬ್ಬಂದಿ ವಾಪಸ್ ಕರೆತಂದಿದ್ದಾರೆ.