ರಾಯಚೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 49 ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
5,249 ಮಂದಿಗೆ ಪೊಲೀಸ್ ಇಲಾಖೆಯಿಂದ ನೋಟಿಸ್ ಕಳುಹಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಮಿನಿಂದ 990 ಜನರಿಗೆ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ. ಹೊರರಾಜ್ಯದಿಂದ ಬಂದವರು, ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಅವರಿಗೆ ಕ್ವಾರಂಟೈನ್ ವಾಚ್ ಆ್ಯಪ್ ಅಪ್‍ಲೋಡ್ ಮಾಡಲಾಗುತ್ತದೆ.
Advertisement
Advertisement
ಜಿಯೋಫೆನ್ಸಿಂಗ್ ಬ್ರಿಚಿಂಗ್ ನಲ್ಲಿ ನಿಯಮ ಉಲ್ಲಂಘಿಸಿದರೆ ಮಾಹಿತಿ ಸಿಗುತ್ತದೆ. ಈ ಮಾಹಿತಿ ಆಧರಿಸಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ 3764 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.